ಸ್ವಾಮಿ ವಿವೇಕಾನಂದ, ಬಸವಣ್ಣ ಕೊಲೆಯಾಗಿದ್ದಾರೆ– ಭಗವಾನ್

7

ಸ್ವಾಮಿ ವಿವೇಕಾನಂದ, ಬಸವಣ್ಣ ಕೊಲೆಯಾಗಿದ್ದಾರೆ– ಭಗವಾನ್

Published:
Updated:

ಮೈಸೂರು: ‘ಸ್ವಾಮಿ ವಿವೇಕಾನಂದ, ಬಸವಣ್ಣ ಅವರನ್ನು ಕೊಲೆ ಮಾಡಲಾಗಿದೆ’ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್ ಇಲ್ಲಿ ಸೋಮವಾರ ಆರೋಪಿಸಿದರು.

ವಿವೇಕಾನಂದ ಅವರು ಬೌದ್ಧಧರ್ಮದ ವಿಚಾರಗಳ ಬಗ್ಗೆ ಮಾತನಾಡಲಾರಂಭಿಸಿದ ಬಳಿಕ ಅವರನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಸರ್ಕಾರ ಈ ಕುರಿತು ತನಿಖೆ ನಡೆಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.‌

ಚಳವಳಿಗಾರರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಬಸವಣ್ಣನವರ ವಿಚಾರಗಳನ್ನು ಒಪ್ಪದ ವೈದಿಕಶಾಹಿ ಜನ ಅವರನ್ನು ಕೊಂದರು. ನಂತರ, ಬಸವಣ್ಣ ಐಕ್ಯರಾದರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಈ ಕುರಿತು ಸಾಕಷ್ಟು ಸಂಶೋಧನೆಗಳು ನಡೆದಿವೆ ಎಂದರು.

ಈ ಕುರಿತು ಆಧಾರಗಳನ್ನು ಒದಗಿಸುವಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸದೆ ಜಾರಿಕೊಂಡರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !