ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್‌ ವಿತರಣೆ

ಆನ್‍ಲೈನ್ ಮೂಲಕ ವಿದ್ಯಾರ್ಜನೆ ಮುಂದುವರಿಸಲು ಉತ್ತಮ ಅವಕಾಶ – ಶಾಸಕ ರಾಮದಾಸ್
Last Updated 23 ಜೂನ್ 2021, 15:26 IST
ಅಕ್ಷರ ಗಾತ್ರ

ಮೈಸೂರು: ಕೇವಲ ತರಗತಿಗಳು ‘ಸ್ಮಾರ್ಟ್‌’ ಆದರೆ ಸಾಲದು, ವಿದ್ಯಾರ್ಥಿ ಸಮುದಾಯವೂ ‘ಸ್ಮಾರ್ಟ್‌’ಆಗಬೇಕಿದೆ. ಆನ್‌ಲೈನ್‌ ಶಿಕ್ಷಣ ಮುಂದುವರಿಸಲು ಹಾಗೂ ಕೌಶಲಗಳನ್ನು ಹೆಚ್ಚಿಸಿಕೊಳ್ಳಲು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ‘ಟ್ಯಾಬ್‌’ನ್ನು ಸರ್ಕಾರ ವಿತರಿಸುತ್ತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

ಇ್ಲಲಿನ ಕುವೆಂಪುನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುಧವಾರ ಅವರು ವಿದ್ಯಾರ್ಥಿಗಳಿಗೆ ‘ಟ್ಯಾಬ್’ ವಿತರಿಸಿ ಮಾತನಾಡಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಅಗತ್ಯ ತಂತ್ರಜ್ಞಾನ ಬಳಕೆ ಮಾಡಲು ಅವಕಾಶ ಇದೆ. ಇದಕ್ಕಾಗಿ ‘ಸ್ಮಾರ್ಟ್’ ಶಿಕ್ಷಣ ನೀಡಲು ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರವೂ ಮುಂದಾಗಿದೆ ಎಂದರು.

ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗಬಾರದು. ಅವರು ಜ್ಞಾನ ಸಂಪಾದನೆಯತ್ತಲೂ ಗಮನ ಹರಿಸಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ರಾಗಿಣಿ, ಸಹ ಪ್ರಾಧ್ಯಾಪಕ ಡಾ.ಎನ್.ಶೇಖರ್, ಸಿದ್ಧಾರ್ಥನಗರ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರವಿಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT