ಪ್ರತಿಭೆಗೆ ಪ್ರೋತ್ಸಾಹ ಅಗತ್ಯ

7
ಉಪ ಮೇಯರ್‌ ಇಂದಿರಾ ಮಹೇಶ್‌ ಅಭಿಮತ

ಪ್ರತಿಭೆಗೆ ಪ್ರೋತ್ಸಾಹ ಅಗತ್ಯ

Published:
Updated:
ಮೈಸೂರಿನಲ್ಲಿ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು

ಮೈಸೂರು: ಕಲಿಯುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರೆ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ಉಪ ಮೇಯರ್‌ ಇಂದಿರಾ ಮಹೇಶ್‌ ಅಭಿಪ್ರಾಯಪಟ್ಟರು.

ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕ ಒಕ್ಕೂಟವು ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಹುತೇಕ ಮಕ್ಕಳಿಗೆ ಇಂದು ಉತ್ತಮ ಶಿಕ್ಷಣ ಸಿಗುತ್ತಿದೆ. ನಗರ ಪ್ರದೇಶಗಳಲ್ಲಿ ಕಲಿಕೆಗೆ ಸಾಕಷ್ಟು ಅವಕಾಶಗಳಿವೆ. ಈ ವೇದಿಕೆಗಳ ಜತೆಗೆ ಮಕ್ಕಳಿಗೆ ಹೆಚ್ಚುವರಿ ಪ್ರೋತ್ಸಾಹ ನೀಡಿದರೆ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತಷ್ಟು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು. ಇದರಿಂದ ಶೈಕ್ಷಣಿಕ ಪ್ರಗತಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಪೋಷಕರು ಈ ನಿಟ್ಟಿನಲ್ಲಿ ಮತ್ತಷ್ಟು ಬದ್ಧತೆ ಬೆಳೆಸಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಆಸ‌ಕ್ತಿಯನ್ನು ಗುರುತಿಸಿ ಅದಕ್ಕೆ ಪ್ರೋತ್ಸಾಹ ನೀಡಬೇಕು. ತಮ್ಮ ಆಸೆಗಳನ್ನು ಮಕ್ಕಳ ಮೇಲೆ ಹೇರಬಾರದು. ಮಕ್ಕಳಿಗೆ ಶಿಕ್ಷಣವನ್ನು ಶಿಕ್ಷೆಯಂತೆ ಮಾಡಿದರೆ ಅವರಿಗೆ ವ್ಯವಸ್ಥೆಯ ಮೇಲೆ ಕೋಪ ಬೆಳೆಯುತ್ತದೆ. ಹಾಗಾಗಿ, ಅವರಿಷ್ಟದ ಕಲಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ದೇವರಾಜು ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ದ್ಯಾವಪ್ಪನಾಯಕ ಪ್ರಾಸ್ತವಿಕವಾಗಿ ಮಾತನಾಡಿದರು. ರಾಜ್ಯಾಧ್ಯಕ್ಷ ಡಾ.ಹನುಮಂತಪ್ಪ ಅತಿಥಿಯಾಗಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !