ಶನಿವಾರ, ಸೆಪ್ಟೆಂಬರ್ 26, 2020
22 °C

‘ಪ್ರಜಾವಾಣಿ ಕ್ವಿಜ್’ ಚಾಂಪಿಯನ್‌ಷಿಪ್‌ನ ಪ್ರತಿಭೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕಳೆದ ಜನವರಿಯಲ್ಲಿ ನಡೆದಿದ್ದ ‘ಪ್ರಜಾವಾಣಿ ಕ್ವಿಜ್’ ಚಾಂಪಿಯನ್‌ಷಿಪ್‌ನ ಗ್ರ್ಯಾಂಡ್‌ ಫಿನಾಲೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದ ಇಲ್ಲಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಅವಳಿ ಸಹೋದರರಾದ ಗೌರವ್‌ ಚಂದನ್–ಗಗನ್‌ ಚಂದನ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಸಾಧನೆಗೈದಿದ್ದಾರೆ.

ಗೌರವ್ ಚಂದನ್ 623 ಅಂಕ ಗಳಿಸಿದ್ದು, ಗಗನ್ ಚಂದನ್ 615 ಅಂಕ ಗಳಿಸಿದ್ದಾರೆ.

‘623 ಅಂಕ ಬರಲಿವೆ ಎಂದು ನಿರೀಕ್ಷಿಸಿದ್ದೆ. ನನ್ನ ನಿರೀಕ್ಷೆ ಹುಸಿಯಾಗಿಲ್ಲ. ಪಿಯು ನಲ್ಲಿ ವಿಜ್ಞಾನ ವಿಭಾಗ ಆಯ್ದುಕೊಂಡು, ಕಂಪ್ಯೂಟರ್ ಸೈನ್ಸ್‌ ಓದುವೆ. ಆಕ್ಸಫರ್ಡ್‌ ವಿಶ್ವವಿದ್ಯಾಲಯದ ‘ರೋಡ್ಸ್‌ ಸ್ಕಾಲರ್‌ಶಿಪ್‌’ ಪಡೆಯಬೇಕು ಎಂಬ ಗುರಿ ಹೊಂದಿರುವೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯನಾಗಿರುವೆ’ ಎಂದು ಬೆಂಗಳೂರಿನ ನಾಗರಬಾವಿ ನಿವಾಸಿಯಾಗಿರುವ ಗೌರವ್ ಚಂದನ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸಮಾಜ ವಿಜ್ಞಾನದಲ್ಲಿ 6 ಅಂಕ ಕಡಿಮೆ ಬಂದಿವೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕುವೆ’ ಎಂದು ಗಗನ್ ಚಂದನ್ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.