ಸೋಮವಾರ, ಸೆಪ್ಟೆಂಬರ್ 27, 2021
22 °C

ತೇಗದ ಮರದ ತುಂಡುಗಳು ವಶ

ಪಿರಿಯಾಪಟ್ಟಣ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ: ತಾಲ್ಲೂಕಿನ ಗಿರಿಗೂರಿನ ಮಿಳಿಂದ ವಿದ್ಯಾಸಂಸ್ಥೆಯ ಮೇಲೆ ಅರಣ್ಯ ಇಲಾಖೆ ಶುಕ್ರವಾರ ದಾಳಿ ನಡೆಸಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 20 ತೇಗದ ಮರದ ತುಂಡುಗಳನ್ನು ವಶಕ್ಕೆ ಪಡೆದು ಸಂಸ್ಥೆಯ ಮುಖ್ಯಸ್ಥ ಹಾಗೂ ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

ಸಂಸ್ಥೆಯ ಆವರಣದಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಕತ್ತರಿಸಿ ಸಿದ್ದ ಪಡಿಸಿದ್ದ 20 ಕಟ್‍ ಪೀಸ್‍ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವುದಾಗಿ ಮಾಹಿತಿ ಪಡೆದ ಆರ್‍ಎಫ್‍ಓ ರತನ್‍ಕುಮಾರ್ ತಂಡ ದಾಳಿ ನಡೆಸಿದೆ.

ಸಾರ್ವಜನಿಕರು ನೀಡಿದ ದೂರಿನಂತೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಗೋವಿಂದಯ್ಯ, ಧರ್ಮದರ್ಶಿ ಅಣ್ಣಯ್ಯ, ಶಾಲೆಯ ಮುಖ್ಯಶಿಕ್ಷಕಿ ಹೇಮಾವತಿ, ಶಿಕ್ಷಕರಾದ ಸುರೇಶ್ ಮತ್ತು ಆಶಾ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.