ಶನಿವಾರ, ನವೆಂಬರ್ 28, 2020
22 °C

ಮೃತದೇಹದ ಗುರುತು ಪತ್ತೆಗೆ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಪಿರಿಯಾ‍ಪಟ್ಟಣ ತಾಲ್ಲೂಕಿನಲ್ಲಿ ಈಚೆಗೆ ಉರಿಯುತ್ತಿರುವ ಸ್ಥಿತಿಯಲ್ಲಿ ದೊರೆತ ಯುವತಿ ಶವದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹದ ಗುರುತು ಪತ್ತೆ ಹಚ್ಚಲು 3 ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಐಪಿಎಸ್‌ ಪ್ರೊಬೇಷನರಿ ಅಧಿಕಾರಿ ಜಿತೇಂದ್ರ ಅವರಿಗೆ ಪ್ರಕರಣದ ತನಿಖೆಯ ಹೊಣೆ ವಹಿಸಲಾಗಿದೆ. ಯುವತಿಯ ಗುರುತು ಪತ್ತೆಗೆ ರಾಜ್ಯದ ಇತರೆ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೂ ಮಾಹಿತಿ ನೀಡಲಾಗಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕಾಣೆಯಾಗಿದ್ದ ಯುವತಿಯೊಬ್ಬರ ಪೋಷಕರು ಬಂದು ಮೃತದೇಹವನ್ನು ನೋಡಿದರಾದರೂ, ಅವರು ಗುರುತು ಪತ್ತೆ ಹಚ್ಚಲಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ನಂತರವಷ್ಟೇ ಸ್ಪಷ್ಟವಾದ ತೀರ್ಮಾನಕ್ಕೆ ಬರಲು ಸಾಧ್ಯ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.