ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಲಿ ಮೆಡಿಸಿನ್ಸ್‌ ಸೇವೆ ಆರಂಭ

Last Updated 8 ಸೆಪ್ಟೆಂಬರ್ 2020, 1:02 IST
ಅಕ್ಷರ ಗಾತ್ರ

ಮೈಸೂರು: ಕೋವಿಡ್-19 ಹೆಚ್ಚುತ್ತಿರುವ ಸಂದರ್ಭದಲ್ಲಿ ತುರ್ತು ಆರೋಗ್ಯ ಸಮಸ್ಯೆಗಳಿಗೆ, ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಇ-ಸಂಜೀವಿನಿ-ಟೆಲಿ ಮೆಡಿಸಿನ್ಸ್ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದಲ್ಲಿ ಪ್ರಾರಂಭಿಸಲಾಗಿದ್ದು, ಈಗ ಮೈಸೂರಿನಲ್ಲೂ ಜಾರಿಗೆ ತರಲಾಗಿದೆ.

ಇ-ಸಂಜೀವಿನಿ-ರಾಷ್ಟ್ರೀಯ ಟೆಲಿ ಸಮಾಲೋಚನಾ ಸೇವೆ (ನ್ಯಾಷನಲ್ ಟೆಲಿ ಕನ್ಸಲ್‍ಟೇಷನ್ ಸರ್ವಿಸ್) ಎಂಬ ಹೆಸರಿನಲ್ಲಿ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದ್ದು, ಇದರ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯದ ಸಮಸ್ಯೆಗಳಿಗೆ ಮನೆಯಿಂದಲೇ ವೈದ್ಯರನ್ನು ಮೊಬೈಲ್ ಮೂಲಕವೇ ಸಂಪರ್ಕಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಟೆಲಿ ಸಮಾಲೋಚನಾ ಆರೋಗ್ಯ ಸೇವೆ ಪಡೆಯಲು ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿ, ಗೂಗಲ್‍ನಲ್ಲಿ ಇ-ಸಂಜೀವಿನಿ ಓಪಿಡಿ ಎಂದು ನಮೂದಿಸಬೇಕು. ಪರದೆಯ ಮೇಲೆ ಬರುವ ಕೇಂದ್ರ ಆರೋಗ್ಯ ಸಚಿವಾಲಯದ ಮುಖಪುಟದಲ್ಲಿ ರೋಗಿಯ ಹೆಸರು, ಲಿಂಗ, ವಯಸ್ಸು, ಮೊಬೈಲ್ ನಂಬರ್ ಮತ್ತು ವಿಳಾಸವನ್ನು ನಮೂದಿಸಿ ಲಾಗಿನ್ ಆಗಬೇಕು. ಬಳಿಕ ಟೋಕನ್ ನಂಬರ್ ಲಭ್ಯವಾಗುವುದು. ಈ ನಂಬರ್ ನೀಡಿ ತಜ್ಞ ವೈದ್ಯರನ್ನು ವಿಡಿಯೊ ಕಾಲ್ ಮೂಲಕ ಸಂಪರ್ಕಿಸಬಹುದಾಗಿದೆ.

ಈ ಸೇವೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಲಭ್ಯವಿರುತ್ತದೆ. ಒಂದು ಬಾರಿ ರಿಜಿಸ್ಟರ್ ಆದರೆ ಮತ್ತೆ ರಿಜಿಸ್ಟರ್ ಆಗುವ ಅಗತ್ಯವಿಲ್ಲ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT