ಗುರುವಾರ , ಅಕ್ಟೋಬರ್ 22, 2020
22 °C

‘ತಿರುಪತಿ–ಪಾರದರ್ಶಕವಾಗಿ ಕಾಮಗಾರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ರಾಜ್ಯದಿಂದ ಹೋಗುವ ಭಕ್ತರಿಗೆ ವ್ಯವಸ್ಥೆ ಮಾಡುವ ಉದ್ದೇಶದಿಂದ ತಿರುಪತಿಯಲ್ಲಿ ವಸತಿ ಗೃಹ ನಿರ್ಮಿ ಸಲಾ ಗುತ್ತಿದ್ದು, ಕಾಮಗಾರಿ ಪಾರದರ್ಶಕವಾಗಿ ನಡೆಯಲಿದೆ. ಸಾ.ರಾ.ಮಹೇಶ್‌ ಅವರಿಗೆ ಅನುಮಾನವಿದ್ದರೆ ಮುಕ್ತವಾಗಿ ಚರ್ಚಿಸಬಹುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಇಲ್ಲಿ ಹೇಳಿದರು.

‘ಈ ವಿಚಾರವಾಗಿ ಈಗಾಗಲೇ ಸದನದಲ್ಲಿ ಕೂಡ ಚರ್ಚಿಸಲಾಗಿದೆ. ಅನಿವಾರ್ಯವಾಗಿ ಆಂಧ್ರ‍ಪ್ರದೇಶದ ಸಂಸ್ಥೆಗಳ ಮೂಲಕ ಕಾಮಗಾರಿ ಮಾಡಿಸಲಾಗುತ್ತಿದೆ’ ಎಂದರು

ದಸರಾ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡುವುದರಿಂದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅರ್ಚಕರು ಕೂಡ ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಸಂಬಂಧ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.