ಭಾನುವಾರ, ಜುಲೈ 25, 2021
22 °C

ಪ್ರತ್ಯೇಕ ಪ್ರಕರಣ; ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದಲ್ಲಿ ಶುಕ್ರವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿನ ಮೇಟಗಳ್ಳಿಯ ಕಾರ್ಖಾನೆಯೊಂದರಲ್ಲಿ ವಾಸವಿದ್ದ ಅಸ್ಸಾಂನ ಕಾರ್ಮಿಕ ದೀಪಕ್ (28) ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕಳೆದ 3 ವರ್ಷಗಳಿಂದಲೂ ಅಸ್ಸಾಂಗೆ ತೆರಳದೆ ಇಲ್ಲೇ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಇವರ ಜತೆಯಲ್ಲಿದ್ದ ಸ್ನೇಹಿತರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ. ಪ್ರಕರಣ ಮೇಟಗಳ್ಳಿ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾಗಿದ್ದ ಮಹಿಳೆ ಶವ ಪತ್ತೆ‌

ಮೈಸೂರು: ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಇಲ್ಲಿನ ವಿದ್ಯಾರಣ್ಯಾಪುರಂ ನಿವಾಸಿ ಗಂಗಾ (65) ಅವರ ಮೃತದೇಹ ನಂಜನಗೂಡಿನ ಸೇತುವೆ ಬಳಿ ಶುಕ್ರವಾರ ಪತ್ತೆಯಾಗಿದೆ. ಆತ್ಮಹತ್ಯೆಯ ಶಂಕೆ ಮೂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ನಾಪತ್ತೆ ಪ್ರಕರಣ ವಿದ್ಯಾರಣ್ಯಪುರಂನಲ್ಲಿ ದಾಖಲಾಗಿತ್ತು.

ಸೋದರನ ಮನೆಗೆ ಬಂದು ಆತ್ಮಹತ್ಯೆ

ಮೈಸೂರು: ತಲಕಾಡು ನಿವಾಸಿ ರಘು (42) ಇಲ್ಲಿನ ವಿದ್ಯಾರಣ್ಯಾಪುರಂನ ಮಿಲ್ಕ್‌ ರಸ್ತೆಯಲ್ಲಿರುವ ಸೋದರನ ಮನೆಗೆ ಬಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿದ್ಯಾರಣ್ಯಪುರಂ ಠಾಣೆಯಲ್ಲಿ ದಾಖಲಾಗಿದೆ.

ಬುಲೆಟ್ ನಾಪತ್ತೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನಕ್ಕೆ

ಮೈಸೂರು: ತಿ.ನರಸೀಪುರ ಠಾಣೆಯಲ್ಲಿ ಬುಲೆಟ್‌ಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಹೆಡ್‌ಕಾನ್‌ಸ್ಟೆಬಲ್‌ ಕೃಷ್ಣೇಗೌಡನನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.