ಮೈಸೂರು: ಮೈಸೂರಿನ ಮಹಾರಾಜ ಕಾಲೇಜಿನ ಚಾವಣಿ ಕುಸಿದು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಶಾಲ್, ಯಶವಂತ್ ಹಾಗೂ ಸಲೀಂ ಗಾಯಗೊಂಡವರು. ತಲೆ ಹಾಗೂ ಮುಖಕ್ಕೆ ಏಟು ಬಿದ್ದಿದ್ದು, ಇವರನ್ನು ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ವಿದ್ಯಾರ್ಥಿಯ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ವೈದ್ಯರು ಹೊಲಿಗೆ ಹಾಕಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಶಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಅನಿತಾ ಹಾಗೂ ಉಪನ್ಯಾಸಕರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಟ್ಟಡದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು,ಇದರಿಂದ ಏಕಾಏಕಿ ಚಾವಣಿಯ ಗಾರೆ ಕಳಚಿ ಬಿದ್ದಿದೆ.

‘ಹಳೇ ಕಟ್ಟಡ ಇದಾಗಿದ್ದು, ಬೇರೆ ಕಡೆತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆಕಾಲೇಜು ವತಿಯಿಂದಲೇಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ. ವಿದ್ಯಾರ್ಥಿಗಳ ಪೋಷಕರು ಕೂಡ ಬಂದಿದ್ದಾರೆ. ನಮ್ಮ ಸಿಬ್ಬಂದಿ ಕೂಡ ಆಸ್ಪತ್ರೆಯಲ್ಲೇ ಇದ್ದು ಕಾಳಜಿ ವಹಿಸುತ್ತಿದ್ದಾರೆ’ ಎಂದು ಪ್ರೊ.ಆರ್.ಶಿವಪ್ಪ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.