ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಕಚೇರಿಗಳಿಗೆ ಮುತ್ತಿಗೆ ನ.27ಕ್ಕೆ

26ಕ್ಕೆ ರಾಷ್ಟ್ರೀಯ ಮುಷ್ಕರ: ದುಂಡು ಮೇಜಿನ ಪೂರ್ವಭಾವಿ ಸಭೆ
Last Updated 20 ನವೆಂಬರ್ 2020, 16:36 IST
ಅಕ್ಷರ ಗಾತ್ರ

ಮೈಸೂರು: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಐಟಿಯುಸಿ, ಐಎನ್‍ಟಿಯುಸಿ, ಸಿಐಟಿಯು, ಎಐಟಿಯುಸಿ, ರೈತ ಸಂಘ, ಬ್ಯಾಂಕ್ ಮತ್ತು ವಿಮಾ ನೌಕರರ ಸಂಘಟನೆಗಳು ಜಂಟಿಯಾಗಿ ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ನ.26ರಂದು ರಾಷ್ಟ್ರೀಯ ಮುಷ್ಕರಕ್ಕೆ ಕರೆ ನೀಡಿವೆ.

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದ ಖಾಸಗಿ ಹೋಟೆಲ್‍ನಲ್ಲಿಈ ಸಂಬಂಧ ಮುಷ್ಕರದ ಯಶಸ್ಸಿಗಾಗಿ ಪೂರ್ವಭಾವಿ ದುಂಡುಮೇಜಿನ ಸಭೆ ನಡೆಯಿತು.

ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕೇಂದ್ರ ಸರ್ಕಾರದ ಆಡಳಿತ ವಿರೋಧಿ ನೀತಿಗಳನ್ನು ಖಂಡಿಸಿ ನ.26ರಂದು ನಡೆಯಲಿರುವ ರಾಷ್ಟ್ರೀಯ ಮುಷ್ಕರಕ್ಕೆ ರೈತಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ. ನ.27ರಂದು ಜಿಲ್ಲೆಯ ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದು ಹೇಳಿದರು.

ಕಾರ್ಮಿಕ ಸಂಘಟನಾ ಸದಸ್ಯ ರಾಮಕೃಷ್ಣ ಮಾತನಾಡಿ ‘ಕೇಂದ್ರ ಸರ್ಕಾರ ಸಾರ್ವಜನಿಕ ವಲಯಗಳನ್ನು ಹಂತ-ಹಂತವಾಗಿ ಖಾಸಗೀಕರಣಗೊಳಿಸುತ್ತಿದೆ. ಇದರಿಂದ ಇನ್ನು ಮುಂದೆ ಆ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಸ್ಥಗಿತವಾಗುತ್ತದೆ. ಈಗಾಗಲೇ ಕಳೆದ ಎರಡೂವರೆ ವರ್ಷಗಳಲ್ಲಿ 10 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜಯರಾಮ್ ಮಾತನಾಡಿ ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಬ್ಯಾಂಕ್‍ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಾಲಕೃಷ್ಣ, ವಿಮಾ ನೌಕರರ ಒಕ್ಕೂಟದ ಜಂಟಿ ಕಾರ್ಯದರ್ಶಿ ಜಿ.ಸುರೇಶ್, ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಸ್.ಕೆ.ರಾಮು, ಚನ್ನಪ್ಪ, ಪೂವಪ್ಪ, ಶ್ರೀಧರ್, ತುಲಾಜಪ್ಪ, ಜಾಕಿರ್ ಹುಸೇನ್, ಮಂಜುನಾಥ್, ಬಲರಾಮ್ ಮತ್ತಿತರರು ದುಂಡು ಮೇಜಿನ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT