ತಂಬಾಕು ಮಾರಾಟ: 18 ಪ್ರಕರಣ ದಾಖಲು

7

ತಂಬಾಕು ಮಾರಾಟ: 18 ಪ್ರಕರಣ ದಾಖಲು

Published:
Updated:
ಹಂಪಾಪುರ ಹೊರ ವಲಯದ ಅಂತರಸಂತೆ ಗ್ರಾಮದಲ್ಲಿ ವಿವಿಧ ಅಂಗಡಿಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ರವಿಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮವಾಗಿ ಮಾರುತ್ತಿದ್ದ ತಂಬಾಕನ್ನು ವಶಪಡಿಸಿಕೊಂಡರು

ಹಂಪಾಪುರ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಇಲ್ಲಿನ ಅಂಗಡಿಗಳಿಗೆ ದಾಳಿ ನಡೆಸಿ 18 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು.

ತಾಲ್ಲೂಕು ವೈದ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ‘ಅಂಗಡಿ ಗಳಲ್ಲಿ ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ. ಆದರೂ ಕೆಲ ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದರ ಬಗ್ಗೆ ದೂರುಗಳು ಕೇಳಿಬಂದಿದ್ದವು. ಆ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಹೇಳಿದರು.

ತಂಬಾಕು ಮಾರಾಟ ಪತ್ತೆಯಾದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡಲಾಗುವುದು. ಜೊತೆಗೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗು ವುದು ಎಂದು ಎಚ್ಚರಿಕೆ ನೀಡಿದರು.

ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಶಿವಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಜು ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !