ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ನಾಳೆಯಿಂದ 21ರವರೆಗೆ ಪ್ರವಾಸಿಗರ ಅರಮನೆ ಪ್ರವೇಶಕ್ಕೆ ನಿರ್ಬಂಧ

Last Updated 18 ಜೂನ್ 2022, 7:36 IST
ಅಕ್ಷರ ಗಾತ್ರ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ, ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಜೂನ್ 19ರಿಂದ ಜೂನ್ 21ರ ಮಧ್ಯಾಹ್ನ 12ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕವಾಗಿ ‌ನಿರ್ಬಂಧವಿರಲಿದೆ.

ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ಪೂರ್ವ ಸಿದ್ಧತೆ ಕೈಗೊಳ್ಳಬೇಕಿರುವುದರಿಂದಾಗಿ ನಿರ್ಬಂಧ ವಿಧಿಸಲಾಗಿದೆ. ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನೂ ಶುಕ್ರವಾರದಿಂದ ಜೂನ್ 22ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅರಮನೆ ಮಂಡಳಿ ತಿಳಿಸಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT