ಪ್ರವಾಸಿಗರ ಮೇಲೆ ಹಾಡಹಗಲೇ ಹಲ್ಲೆ

ಭಾನುವಾರ, ಜೂನ್ 16, 2019
22 °C
ನಗರದ ಹೃದಯ ಭಾಗದಲ್ಲಿ ಘಟನೆ

ಪ್ರವಾಸಿಗರ ಮೇಲೆ ಹಾಡಹಗಲೇ ಹಲ್ಲೆ

Published:
Updated:

ಮೈಸೂರು: ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಪ್ರವಾಸಿಗರ ಮೇಲೆ ಮದ್ಯಪಾನ ಮಾಡಿದ ನಾಲ್ವರು ಹಲ್ಲೆ ನಡೆಸಿದ್ದಾರೆ. ಜತೆಗೆ, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ನಾಲ್ವರ ಪೈಕಿ ಒಬ್ಬ ಆರೋಪಿ ಚಂದು ಎಂಬಾತನನ್ನು ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಟಿ.ಟಿ ವಾಹನದಲ್ಲಿ ಭಾನುವಾರ ಬಂದ ಪ್ರವಾಸಿಗರು ಚಾಮುಂಡಿಬೆಟ್ಟದಿಂದ ಕೆ.ಆರ್.ಎಸ್‌ಗೆ ಹೋಗುವ ಮಾರ್ಗಮಧ್ಯೆ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಚಾಮರಾಜ ನೂರಡಿ ರಸ್ತೆಯಲ್ಲಿ ತಾತಯ್ಯ ವೃತ್ತದ ಸಿಗ್ನಲ್ (ಶಾಂತಲಾ ಸಿನಿಮಾ ಮಂದಿರದ ಬಳಿ) ಬಳಿ ವಾಹನ ನಿಲ್ಲಿಸಿದ್ದಾರೆ. ರಸ್ತೆ ಬದಿ ಮದ್ಯಸೇವಿಸುತ್ತ ಕುಳಿತಿದ್ದ ನಾಲ್ವರು ವಾಹನದಲ್ಲಿದ್ದ ಮಹಿಳೆಯರನ್ನು ಚುಡಾಯಿಸಿ, ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ. ಇದರಿಂದ ಕೋಪಗೊಂಡ ಪ್ರವಾಸಿಗರು ಪ್ರಶ್ನಿಸಿದ್ದಾರೆ.

ಇದರಿಂದ ಕೆರಳಿದ ದುಷ್ಕರ್ಮಿಗಳು ಪ್ರವಾಸಿಗರ ಪೈಕಿ ಕಾರ್ತೀಕ್, ಪರಮೇಶ್, ಮುರುಳಿ, ಸೆಲ್ವಂ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ರಸ್ತೆ ವಿಭಜಕದಲ್ಲಿ ಇಡಲಾಗಿದ್ದ ಹೂಕುಂಡಗಳ ಗಿಡಗಳನ್ನು ಕಿತ್ತುಕೊಂಡು ಹೊಡೆದಿದ್ದಾರೆ. ಬಿಯರ್ ಬಾಟಲಿಗಳನ್ನು ಪ್ರವಾಸಿಗರ ಮೇಲೆ ಎಸೆದಿದ್ದಾರೆ. ಮಹಿಳೆಯರ ಬಟ್ಟೆಗಳನ್ನು ಹಿಡಿದು ಎಳೆದಾಡಿದ್ದಾರೆ. ಇದರಿಂದ ಗಾಯಗೊಂಡ ಐವರು ಪ್ರವಾಸಿಗರನ್ನು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಕಳುಹಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬಾತನನ್ನು ಬಂಧಿಸಲಾಗಿದೆ,  ಉಳಿದ ಮೂವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‍ಪ್ರಕರಣ ಕೆ.ಆರ್.ಠಾಣೆಯಲ್ಲಿ ದಾಖಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !