ಬುಧವಾರ, ಆಗಸ್ಟ್ 4, 2021
20 °C

ನಗರದಲ್ಲಿ ಉರುಳಿದ ಬೃಹತ್ ಮರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ವಿದ್ಯಾರಣ್ಯಾಪುರಂನ 4ನೇ ಮುಖ್ಯರಸ್ತೆಯ 3ನೇ ಅಡ್ಡರಸ್ತೆಯಲ್ಲಿ ಮಂಗಳವಾರ ಸಂಜೆ ಬೃಹತ್ ಮರ ಉರುಳಿ ಬಿದ್ದಿದೆ. ಮನೆಯೊಂದರ ಕಾಂಪೌಂಡ್ ಇದರಿಂದ ಜಖಂಗೊಂಡಿದೆ.

ಇದರ ಬೇರು ಶಿಥಿಲಾವಸ್ಥೆ ತಲುಪಿದ್ದರಿಂದ ಮರವು ಬಿದ್ದಿದೆ ಎಂದು ಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್ ತಿಳಿಸಿದ್ದಾರೆ.

ಪಾಲಿಕೆ, ಸೆಸ್ಕ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ನಗರದಲ್ಲಿ ಅಪಾಯದಲ್ಲಿರುವ ಮರಗಳ ಸಮೀಕ್ಷೆ ಕಾರ್ಯ ನಡೆಸಬೇಕು. ಉರುಳುವ ಹಂತದ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಬಂದ ಅಭಯ್ ರಕ್ಷಣಾ ತಂಡವು ಮರವನ್ನು ತೆರವುಗೊಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.