ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕರಲ್ಲಿ‌ ನಡುಕ ಶುರುವಾಗಿದೆ: ಸಚಿವ ಅಶ್ವತ್ಥ ನಾರಾಯಣ

Last Updated 4 ಅಕ್ಟೋಬರ್ 2021, 7:20 IST
ಅಕ್ಷರ ಗಾತ್ರ

ಮೈಸೂರು: ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ನಡುಕ ಕಾಂಗ್ರೆಸ್ ನಾಯಕರಲ್ಲಿ ಮೂಡಿದೆ. ಹೀಗಾಗಿಯೇ ಅವರು ಬಿಜೆಪಿಯಿಂದ ಕೆಲವು ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂಬ ಸುದ್ದಿ ಹರಡಿದ್ದಾರೆ ಎಂದು ಉನ್ನತ ಶಿಕ್ಷಣಸಚಿವ ಅಶ್ವತ್ಥ ನಾರಾಯಣ ತಿಳಿಸಿದರು.

ರಾಷ್ಟ್ರಮಟ್ಟದಲ್ಲೇ ಕಾಂಗ್ರೆಸ್ ಒಡೆದು ಹೋಗಿದೆ. ಅಲ್ಲಿ ಯಾರು ನಾಯಕರು ಎಂಬುದೇ ಗೊತ್ತಾಗುತ್ತಿಲ್ಲ. ಎಲ್ಲರೂ ಮುಖ್ಯಮಂತ್ರಿ ಆಗಬೇಕು ಎಂದು ಪ್ರಯತ್ನಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಎಂದೆಂದೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದರು.

ಕೋವಿಡ್ ನಿಯಂತ್ರಣಕ್ಕೆ ಬಂದು ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾದ ಕೂಡಲೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪೂರ್ವ ಪ್ರಾಥಮಿಕ ಹಂತದಿಂದಲೇ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಉಪಚುನಾವಣೆ ಉಸ್ತುವಾರಿಗಳಲ್ಲಿ ಬಿ.ವೈ.ವಿಜಯೇಂದ್ರ ಅವರನ್ನು ಕೈಬಿಟ್ಟಿರುವುದರಕ್ಕೆ ಹೆಚ್ಚಿನ ಮಹತ್ವ ಕೊಡಬೇಕಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಮೋದಿ ಒಬ್ಬರ ಹೆಸರನ್ನೇಳಿ ಚುನಾವಣೆ ಗೆಲ್ಲಬೇಡಿ. ಎಲ್ಲರೂ ತಮ್ಮ ತಮ್ಮ ಪ್ರಯತ್ನ ಮಾಡಿ ಚುನಾವಣೆಯಲ್ಲಿ ಗೆಲ್ಲುವತ್ತ ಗಮನಹರಿಸಬೇಕು ಹೇಳಿದ್ದಾರೆ. ಈಗಲೂ ಎಲ್ಲೇ ಹೋದರು ಮೋದಿಯೆ ಪ್ರಧಾನಮಂತ್ರಿ ಆಗಬೇಕು ಎಂದು ಜನರು ಹೇಳುತ್ತಿದ್ದಾರೆ. ಬೇಕಾದರೆ ಹಾಸನ ಕನಕಪುರದಲ್ಲಿ ಯಾರು ಬೇಕಾದರೂ ಸಮೀಕ್ಷೆ ನಡೆಸಬಹುದು ಎಂದು ಸವಾಲೆಸೆದರು.

ಶಾಸಕ ರಾಮದಾಸ್ ನಮ್ಮ ಅಗ್ರಮಾನ್ಯ ನಾಯಕರು. ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ಸ್ಥಾನಮಾನಗಳು ಸಿಗಲಿವೆ ಎಂದು ತಿಳಿಸಿದರು.

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ರಾಮದಾಸ್ ನಿರಂತರವಾಗಿ ಮಾಡುತ್ತಿದ್ದಾರೆ‌. ಇವರು ನಡೆಸುತ್ತಿರುವ ಮೋದಿ ಯುಗ್ ಉತ್ಸವ ರಾಜ್ಯಕ್ಕೆ ಮಾದರಿ ಕಾರ್ಯ ಎಂದು ಇಲ್ಲಿ ಶ್ಲಾಘಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT