ನಿಲ್ಲದ ಆದಿವಾಸಿಗಳ ಆಕ್ರೋಶ

ಸೋಮವಾರ, ಮೇ 20, 2019
28 °C
ಅಹೋರಾತ್ರಿ ಧರಣಿ: ಬೇಡಿಕೆ ಈಡೇರಿಸಲು ಒತ್ತಾಯ

ನಿಲ್ಲದ ಆದಿವಾಸಿಗಳ ಆಕ್ರೋಶ

Published:
Updated:
Prajavani

ಎಚ್.ಡಿ.ಕೋಟೆ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಹಾಡಿ ಅರಣ್ಯ ಸಮಿತಿಗಳ ಒಕ್ಕೂಟ ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಹುಣಸೂರು ತಾಲ್ಲೂಕುಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವು ಮೂರನೇ ದಿನಕ್ಕೆ ಮುಂದುವರಿದೆ.

ಪಟ್ಟಣದ ಮಿನಿ ವಿಧಾನಸೌಧ ಮುಂಭಾಗ ಮೂರು ತಾಲ್ಲೂಕಿನ ಆದಿವಾಸಿಗಳು ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ನಮ್ಮ ಬೇಡಿಕೆಗಳನ್ನು ಬಗೆಹರಿಸುವವರೆಗೂ ಇಲ್ಲಿಂದ ತೆರಳುವುದಿಲ್ಲ ಎಂದು ಆಗ್ರಹಿಸಿದ್ದಾರೆ.

ಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿ.ಅನಿಲ್ ಕುಮಾರ್, ‘ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ’. ಅವರು ‘ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ ಹಕ್ಕು ಕಾಯ್ದೆ ಕುರಿತು ಗುರುವಾರ ಸಭೆ ನಡೆಯಲಿದೆ ಅಲ್ಲಿ ಚರ್ಚಿಸೋಣ’ ಎಂದು ತಿಳಿಸಿದ್ದಾರೆ. ಆದ್ದರಿಂದ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.

ಶಾಸಕರ ಮನವಿಗೆ ಒಪ್ಪದ ಪ್ರತಿಭಟನಾಕಾರರು ನಾಳೆಯಿಂದ ಸರ್ವೆ ಕಾರ್ಯ ಪ್ರಾರಂಭಿಸಿದರೆ ಮಾತ್ರವೇ ಪ್ರತಿಭಟನೆ ಕೈಬಿಡುತ್ತೇವೆ. ಇಲ್ಲವಾದಲ್ಲಿ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಉತ್ತರಿಸಿದರು.

ಪ್ರತಿಭಟನೆಯಲ್ಲಿ ಭೀಮನಹಳ್ಳಿ ಮಹದೇವು, ಕ್ಷೀರಸಾಗರ್, ಶೈಲೇಂದ್ರ, ಪುಟ್ಟಬಸವಯ್ಯ, ಚಾ.ಶಿವಕುಮಾರ್, ಸಣ್ಣಕುಮಾರ್, ಮಹದೇವು, ಸಿದ್ದರಾಜು, ಅಯ್ಯಪ್ಪ, ಶಂಕರ್, ಕರಿಯಪ್ಪ, ಶಾಂತಿ, ಜಯಮ್ಮ, ಜಾನಕಮ್ಮ, ಸರಸು ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !