ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್‌ಗೆ ಗೆಲುವು

Last Updated 12 ಜೂನ್ 2018, 19:08 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನಗಳಲ್ಲಿ ಜಯ ಸಾಧಿಸಿವೆ. ಇನ್ನುಳಿದ ನಾಲ್ಕರಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ತಲಾ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಸತತ ನಾಲ್ಕನೇ ಬಾರಿಗೆ ಗೆಲುವಿನ ನಗೆ ಬೀರಿದ್ದರೆ, ಬೆಂಗಳೂರು ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರು ಹಾಲಿ ಸದಸ್ಯ ಜೆಡಿಎಸ್‌ನ ರಮೇಶ್‌ಬಾಬು ವಿರುದ್ಧ ಸುಲಭದ ಜಯ ಸಾಧಿಸಿದ್ದಾರೆ.

ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್, ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಜೆಡಿಎಸ್‌ನ ಪ್ರತಾಪ್‌ರೆಡ್ಡಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಅ.ದೇವೇಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಎಸ್‌.ಎಲ್‌.ಭೋಜೇಗೌಡ ಮುನ್ನಡೆ
ಕಾಯ್ದುಗೊಂಡಿದ್ದಾರೆ.

ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದಲೇ ಮತಎಣಿಕೆ ಶುರುವಾಯಿತು. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವಿಗಾಗಿ 7,933 ಮತಗಳ ಕೋಟಾ ನಿಗದಿಪಡಿಸಲಾಗಿತ್ತು. ಮೊದಲ ಪ್ರಾಶಸ್ತ್ಯದ ಮತ ಎಣಿಕೆ ಮುಗಿದಾಗ ಮರಿತಿಬ್ಬೇಗೌಡ 6,003 ಹಾಗೂ ಕಾಂಗ್ರೆಸ್‌ನ ಎಂ.ಲಕ್ಷ್ಮಣ್ 5,514 ಮತಗಳನ್ನು ಪಡೆದಿದ್ದರು. ಎಲಿಮಿನೇಷನ್ ಸುತ್ತಿನಲ್ಲಿ ಇವರಿಬ್ಬರ ಮಧ್ಯೆ ತೀವ್ರ ಪೈಪೋಟಿ ಇತ್ತು. ಇನ್ನುಳಿದ ನಾಲ್ಕು ಕ್ಷೇತ್ರಗಳ ಮತಎಣಿಕೆ ಕಾರ್ಯ ಮುಂದುವರಿದಿದ್ದು, ತಡರಾತ್ರಿ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT