ಶುಕ್ರವಾರ, ಮೇ 27, 2022
29 °C

ಅತ್ಯಾಚಾರ ಪ್ರಕರಣ: ಎರಡು ತನಿಖಾ ತಂಡಗಳ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗೆ ಸಂಬಂಧಿಸಿ ಕೆ.ಆರ್.ವಿಭಾ ಗದ ಎಸಿಪಿ ನೇತೃತ್ವದಲ್ಲಿ 2 ತನಿಖಾ ತಂಡ ರಚಿಸಲಾಗಿದ್ದು, ಆರೋಪಿಗಳ ಶೋಧಕಾರ್ಯ ಶುರುವಾಗಿದೆ.

ಮೈಸೂರಿನ ಹೊರವಲಯದ ಲಿಂಗಾಂಬುಧಿಪಾಳ್ಯ ಬಳಿಯ ಖಾಸಗಿ ಬಡಾವಣೆಯಲ್ಲಿ ಬುಧವಾರ ರಾತ್ರಿ ದುಷ್ಕರ್ಮಿಗಳು ಯುವತಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು. ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದರು. ಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಆದರೆ, ಘಟನೆ ನಡೆದ ಸ್ಥಳ ಮೈಸೂರು ನಗರ ಕಮಿಷನರೇಟ್ ವ್ಯಾಪ್ತಿಗೆ ಬರಲಿದೆ ಎಂಬುದನ್ನು ಅರಿತು ಪ್ರಕರಣವನ್ನು ಮೈಸೂರು ನಗರ ಪೊಲೀಸರಿಗೆ ವರ್ಗಾವಣೆಯಾಗಿತ್ತು. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಪೊಲೀಸರು ಪ್ರಕರಣದ ಪತ್ತೆಗೆ 8 ತಂಡ ರಚಿಸಿದ್ದಾರೆ. ಜಯಪುರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಮುಂದುವರೆಸಿದ್ದಾರೆ.

ಸಿ.ಸಿ.ಟಿ.ವಿ. ಕ್ಯಾಮೆರಾ ಪರಿಶೀಲನೆ: ಪ್ರಕರಣದ ಸುಳಿವು ಪತ್ತೆಗೆ ಪೊಲೀಸರು ಹೊರವರ್ತುಲ ರಸ್ತೆ ಆಸುಪಾಸಿನ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮೊಬೈಲ್‌ ಟವರ್‌ಗಳ ಸಹಾಯದಿಂದ ಘಟನೆ ವೇಳೆ ಚಾಲ್ತಿಯಲ್ಲಿದ್ದ ಮೊಬೈಲ್‌ ಫೋನ್‌ಗಳನ್ನೂ ಪರಿಶೀಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು