ಶನಿವಾರ, ಜುಲೈ 31, 2021
20 °C

ಮೈಸೂರು: ಎರಡು ವಾರ ಲಾಕ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರಗೂರು (ಮೈಸೂರು): ‘ರಾಜ್ಯ ಸರ್ಕಾರ ಮೈಸೂರು ಜಿಲ್ಲೆಯಲ್ಲಿ ಎರಡು ವಾರ (ಜುಲೈ 5ರವರೆಗೂ) ಲಾಕ್‌ಡೌನ್‌ ಮುಂದುವರೆಸಿ ಆದೇಶ ಹೊರಡಿಸಿದೆ. ಇದನ್ನು ಪಾಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಭಾನುವಾರ ಇಲ್ಲಿ ತಿಳಿಸಿದರು.

ತಮ್ಮನ್ನು ಭೇಟಿಯಾದ ಮಾಧ್ಯಮದವರೊಟ್ಟಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘ನಾನು ಅಧಿಕಾರ ವಹಿಸಿಕೊಂಡ ಸಂದರ್ಭ ಕೋವಿಡ್‌ ಪಾಸಿಟಿವಿಟಿ ದರ ಶೇ 16ರಷ್ಟಿತ್ತು. ಇದೀಗ ಮೂರು ದಿನದ ಸರಾಸರಿ ಶೇ 9ರಷ್ಟಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ತಗ್ಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಈ ಹಿಂದೆ ಜಾರಿಯಲ್ಲಿದ್ದ ಲಾಕ್‌ಡೌನ್‌ ನಿಯಮಗಳೇ ಮುಂದಿನ ಎರಡು ವಾರ ಅನುಷ್ಠಾನದಲ್ಲಿರುತ್ತವೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇನ್ಯಾವುದಕ್ಕೂ ಅವಕಾಶವಿರಲ್ಲ. ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗುವುದು. ಆರ್‌ಟಿಪಿಸಿಆರ್‌ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಜಿಲ್ಲಾಧಿಕಾರಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು