ಸೋಮವಾರ, ಮೇ 16, 2022
30 °C

ಕೆಎಸ್‌ಒಯುಗೆ ಯುಜಿಸಿ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ 12 ಬಿ ಮಾನ್ಯತೆ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶುಕ್ರವಾರ, ಯುಜಿಸಿಯ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಛೇರ್‌ಮನ್‌ ಸೇರಿದಂತೆ ಮೂವರು ತಜ್ಞರು, ಒಬ್ಬರು ಸಂಚಾಲಕರು ಈ ತಂಡದಲ್ಲಿದ್ದು, ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಮೂಲ ಸೌಕರ್ಯ ಸೇರಿದಂತೆ ಇನ್ನಿತರೆ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದಿದೆ ಎಂಬುದು ಗೊತ್ತಾಗಿದೆ.

ತಜ್ಞರ ತಂಡವು ಶನಿವಾರ ಸಹ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಪರಿಶೀಲನೆ ನಡೆಸಲಿದೆ. ಈ ಬಾರಿ 12 ಬಿ ಮಾನ್ಯತೆ ದೊರೆಯುವ ವಿಶ್ವಾಸವಿದೆ ಎಂದು ಮುಕ್ತ ವಿ.ವಿ.ಯ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು