ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ.ಗೋವಿಂದರಾಜನ್‌, ಪ್ರಶಾಂತ್‌ ಪ್ರಕಾಶ್‌ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್‌

Last Updated 5 ಸೆಪ್ಟೆಂಬರ್ 2021, 10:12 IST
ಅಕ್ಷರ ಗಾತ್ರ

ಮೈಸೂರು: ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಬಯೊಕೆಮಿಸ್ಟ್ರಿ ವಿಭಾಗದ ಗೌರವ ಪ್ರಾಧ್ಯಾಪಕ ಡಾ.ಗೋವಿಂದರಾಜನ್‌ ಪದ್ಮನಾಭನ್‌ ಹಾಗೂ ರಾಜ್ಯ ಸರ್ಕಾರದ ನವೋದ್ಯಮ ವಿಷನ್‌ ಗ್ರೂಪ್‌ ಮುಖ್ಯಸ್ಥ ಪ್ರಶಾಂತ್‌ ಪ್ರಕಾಶ್‌ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್‌ ಪ್ರಕಟಿಸಿದೆ.

‘ಸೆ.7ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಕ್ರಾಫರ್ಡ್‌ ಭವನದಲ್ಲಿ ನಡೆಯಲಿರುವ 101ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಪದವಿ ಪ್ರದಾನ ಮಾಡುವರು. ನವದೆಹಲಿಯ ಡಿಎಸ್‌ಐಆರ್‌ ಕಾರ್ಯದರ್ಶಿ ಹಾಗೂ ಸಿಎಸ್‌ಐಆ‌ರ್‌ ಮಹಾನಿರ್ದೇಶಕ ಪ್ರೊ.ಶೇಖರ್‌ ಸಿ.ಮಂಡೆ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಭಾಗವಹಿಸಲಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.‌

‘ಗೋವಿಂದರಾಜನ್‌ ತಮಿಳುನಾಡಿನವರಾಗಿದ್ದು, ಪದ್ಮಭೂಷಣ ಪುರಸ್ಕಾರಕ್ಕೆ ‍ಪಾತ್ರರಾಗಿದ್ದಾರೆ. ಬೆಂಗಳೂರಿನ ಐಐಎಸ್ಸಿ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಆಕ್ಸೆಲ್‌ ಇಂಡಿಯಾದ ಸಂಸ್ಥಾಪಕ ಪಾರ್ಟನರ್‌ ಕೂಡ ಆಗಿರುವ ಪ್ರಶಾಂತ್‌, ಸಾಮಾಜಿಕ ಸೇವೆಯಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘2020–21ನೇ ಬ್ಯಾಚ್‌ನ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯ 29,852 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. 216 ಅಭ್ಯರ್ಥಿಗಳಿಗೆ ಒಟ್ಟು 387 ಸ್ವರ್ಣಪದಕ, 178 ದತ್ತಿ ಬಹುಮಾನ ನೀಡಿ ಗೌರವಿಸಲಾಗುವುದು. 244 ಅಭ್ಯರ್ಥಿಗಳಿಗೆ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುವುದು. ಎಂ.ಎಸ್ಸಿ ರಸಾಯನ ವಿಜ್ಞಾನ ವಿದ್ಯಾರ್ಥಿನಿ ಚೈತ್ರಾ ನಾರಾಯಣ20 ಸ್ವರ್ಣ ಪದಕ ಹಾಗೂ ನಾಲ್ಕು ದತ್ತಿ ಬಹುಮಾನ ಪಡೆದಿದ್ದಾರೆ’ ಎಂದರು.

ಕುಲಸಚಿವ (ಆಡಳಿತ) ಪ್ರೊ.ಆರ್‌.ಶಿವಪ್ಪ, ಕುಲಸಚಿವ (ಪರೀಕ್ಷಾಂಗ) ಪ್ರೊ.ಎ.ಪಿ.ಜ್ಞಾನ ಪ್ರಕಾಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT