ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ವಿ.ಶ್ರೀನಿವಾಸ ಪ್ರಸಾದ್

Last Updated 6 ಆಗಸ್ಟ್ 2021, 5:49 IST
ಅಕ್ಷರ ಗಾತ್ರ

ಮೈಸೂರು: ಆತ್ಮತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದರು.

ನಾಲ್ಕು ವರ್ಷದ ಹಿಂದೆಯೇ ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಮತ್ತೆ ಸ್ಪರ್ಧೆ ಮಾಡಿದೆ. ಮುಂದೆ ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ ಎಂದು ಇಲ್ಲಿ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಹೇಳಿದರು.

50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದೆ. ರಾಜಕೀಯ ಜೀವನದ ಎಲ್ಲ ಏಳು ಬೀಳುಗಳನ್ನು ದಾಖಲಿಸಿದ್ದೇನೆ ಎಂದರು.

ತಾಯಿಯೆ ಮಗನಿಗೆ ಮೋಸ ಮಾಡಿದಾಗ ಏನು ಮಾಡಬೇಕು?– ಶಾಸಕ ಮಹೇಶ್

ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎನ್.ಮಹೇಶ್ ಅವರು ಪ್ರಸಾದ್ ಅವರನ್ನು ಭೇಟಿಯಾಗಿ ಶುಭ ಕೋರಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್, ಬಿಎಸ್‌ಪಿ ನನ್ನ ತಾಯಿ ಪಕ್ಷ ಎಂದು ಹೇಳಿದ್ದೆ. ಆದರೆ ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು. ಮಗ ಅನಾಥನಾಗಿದ್ದ, ಹೀಗಾಗಿ ರಾಜಕೀಯವಾಗಿ ದಾರಿ ಕಂಡುಕೊಂಡಿದ್ದೇನೆ ಎಂದು ತಿಳಿಸಿದರು.

ನನ್ನನ್ನು ಟ್ರೋಲ್ ಮಾಡುತ್ತಿರುವವರು ಯಾರು ಎಂಬುದು ನನಗೆ ಗೊತ್ತಿದೆ. ನನ್ನನ್ನು ಟ್ರೋಲ್ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಆ ಸಮಯವನ್ನ ಬಿಎಸ್‌ಪಿ ಪಕ್ಷ ಕಟ್ಟಲು ಬಳಸಿ ಎಂದು ಸಲಹೆ ನೀಡಿದರು.

ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಇದರಿಂದ ನನ್ನ ಮತಬ್ಯಾಂಕ್ ಕೈ ತಪ್ಪುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT