ಮೈಸೂರು: ನಗರದ ಪುರಭವನದಲ್ಲಿ ಇದೇ 20ರಂದು ‘ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ’ಯ ಪರಿಶಿಷ್ಟ ಪಂಗಡ ವಿಭಾಗವು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಿದೆ.

‘ಶಾಸಕ ಅನಿಲ್ ಕುಮಾರ್‌ಬುಧವಾರ ಸಂಜೆ 4.30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್‌ಸೇಠ್, ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ’ ಎಂದು ವಿಭಾಗದ ನಗರ ಘಟಕದ ಅಧ್ಯಕ್ಷ ಎಸ್.ರೋಹಿತ್ ಅವರು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಕೊರೊನಾ ವಾರಿಯರ್‌ಗಳನ್ನು ಸನ್ಮಾನಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಗರಿಕರು ಭಾಗವಹಿಸಬೇಕು’ ಎಂದು ಅವರು ಮನವಿ ಮಾಡಿದರು.

ಗೋಷ್ಠಿಯಲ್ಲಿ ವಿಭಾಗದ ಪ್ರಧಾನ ಕಾರ್ಯದರ್ಶಿ ಆರ್.ಯೋಗೇಶ್ ನಾಯಕ್, ಸಂಘಟನಾ ಕಾರ್ಯದರ್ಶಿ ಕೆಂಪನಾಯಕ, ರಮೇಶ್, ರಂಗಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.