ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಮನೆ ಮೇಲಿನ ದಾಳಿ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಸ್ಪರ್ಶ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲು ಆಗ್ರಹ
Last Updated 9 ಜುಲೈ 2020, 14:42 IST
ಅಕ್ಷರ ಗಾತ್ರ

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಮನೆಯ ಮೇಲಿನ ದಾಳಿ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡ ಪುರುಷೋತ್ತಮ, ಅಸ್ಪೃಶ್ಯತೆಯ ಕೂಪವಾಗಿದ್ದ ಭಾರತಕ್ಕೆ ಬೆಳಕು ನೀಡುವ ಸಂವಿಧಾನವನ್ನು ನೀಡಿದ್ದು ಅಂಬೇಡ್ಕರ್‌. ಇದರಿಂದಾಗಿ ಭಾರತ ಮನುವಾದಿ ಹಿಂದೂ ರಾಷ್ಟ್ರವಾಗುವುದು ತಪ್ಪಿತು. ಹೀಗಾಗಿ, ಮನುವಾದಿಗಳಿಗೆ ಇವರ ಮೇಲೆ ದ್ವೇಷ ಇದೆ’ ಎಂದರು.

ಅಂಬೇಡ್ಕರ್ ನಿವಾಸದ ಮೇಲೆ ದಾಳಿ ನಡೆಸಿದವರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.

ಪಾಲಿಕೆ ಸದಸ್ಯ ಸುನಂದಕುಮಾರ್, ಮುಖಂಡರಾದ ವಿಜಯನಗರ ಅಶೋಕ್, ರೇವಣ್ಣ, ಪ್ರದೀಪ್‍ಕುಮಾರ್, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT