ಶುಕ್ರವಾರ, ಅಕ್ಟೋಬರ್ 18, 2019
20 °C

ರಾಹುಲ್‌ ಗಾಂಧಿಯನ್ನು ಬಹಿಷ್ಕರಿಸಲು ವಾಟಾಳ್ ಕರೆ

Published:
Updated:

ಮೈಸೂರು: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಸಬೇಕು ಹಾಗೂ ಸಂಸದ ರಾಹುಲ್‌ಗಾಂಧಿ ಅವರನ್ನು ರಾಜ್ಯದಲ್ಲಿ ಬಹಿಷ್ಕರಿಸಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಶನಿವಾರ ಇಲ್ಲಿನ ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

ಸುಪ್ರೀಂಕೋರ್ಟ್‌ನ ಸ್ಪಷ್ಟ ಆದೇಶ ಇದ್ದಾಗ್ಯೂ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ರಾಹುಲ್‌ ಗಾಂಧಿ ಹೇಳಿರುವುದು ಸರಿಯಲ್ಲ ಎಂದು ಖಂಡಿಸಿದರು.

ಇದನ್ನೂ ಓದಿ... ಬಂಡೀಪುರ: ರಾತ್ರಿ ಸಂಚಾರ ನಿಷೇಧ ತೆರವುಗೊಳಿಸದಂತೆ ಮನವಿ -ವಾಟಾಳ್‌ ಪ್ರತಿಭಟನೆ

ಬಂಡೀಪುರ ಕರ್ನಾಟಕದ ವನ್ಯ ಸಂಪತ್ತು. ಇದನ್ನು ರಕ್ಷಿಸಬೇಕಾದ್ದು ಎಲ್ಲರ ಹೊಣೆ. ಆದರೆ, ಮರದ ಮಾಫಿಯಾ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದಕ್ಕೆ ಕೇರಳ ಸರ್ಕಾರ ಸಹ ಸ್ಪಂದಿಸುತ್ತಿರುವುದು ದುರದೃಷ್ಟಕರ ಎಂದು ಕಿಡಿಕಾರಿದರು.

ಬಂಡೀಪುರದಲ್ಲಿ ಹೊಸ ರಸ್ತೆ ನಿರ್ಮಿಸಲು ಕೇಂದ್ರ ಸರ್ಕಾರ ಸಮಿತಿ ರಚಿಸಬಾರದು. ಅಲ್ಲಿನ ವನ್ಯಜೀವಿಗಳನ್ನು ಉಳಿಸುವ ಕೆಲಸ ಮಾಡಬೇಕೇ ಹೊರತು ಅಳಿಸುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.

Post Comments (+)