ಬುಧವಾರ, ಸೆಪ್ಟೆಂಬರ್ 22, 2021
21 °C

ಎಚ್‌.ವಿಶ್ವನಾಥ್‌– ವಿಜಯ್‌ ರಹಸ್ಯ ಮಾತುಕತೆ; ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಲಿಗ್ರಾಮ: ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರು ಮುಡಾ ಮಾಜಿ ಅಧ್ಯಕ್ಷ ಹರದನಹಳ್ಳಿ ವಿಜಯ್‌ ಅವರನ್ನು ಶುಕ್ರವಾರ ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದು, ತಾಲ್ಲೂಕಿನ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿಶ್ವನಾಥ್‌ ಅವರು ಹಬ್ಬದ ದಿನವೇ ವಿಜಯ್‌ ಅವರ ತೋಟದ ಮನೆಯಲ್ಲಿ 3 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ಜೆಡಿಎಸ್‌ನಲ್ಲಿದ್ದ ವಿಜಯ್‌, ಮಿರ್ಲೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ಮುಡಾ ಅಧ್ಯಕ್ಷರಾಗಿದ್ದರು. ಶಾಸಕ ಸಾ.ರಾ.ಮಹೇಶ್ ಬಣದಿಂದ ದೂರ ಉಳಿದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಬಣದಲ್ಲಿ ಗುರುತಿಸಿಕೊಂಡಿದ್ದರು.

ಸ್ವಂತ ಹಣದಲ್ಲಿ ಸಾ.ರಾ ಮಹೇಶ್‌ ಕೋವಿಡ್ ಆಸ್ಪತ್ರೆ ತೆರೆದಾಗ, ಭಿನ್ನಾಭಿಪ್ರಾಯ ಮರೆತು ವಿಶ್ವನಾಥ್‌ ಶ್ಲಾಘಿಸಿದ್ದರು. ಆದರೆ ಈಗ ಮಹೇಶ್ ಅವರಿಂದ ದೂರ ಉಳಿದಿರುವ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿರುವುದು ಅಚ್ಚರಿ ಮೂಡಿಸಿದೆ.

‘ಜಪದಕಟ್ಟೆಗೆ ಹೋಗಿ ವಾಪಸ್‌ ಬರುವಾಗ ವಿಜಯ್‌ ಮನೆಗೆ ಹೋಗಿ ಹಬ್ಬದ ಶುಭಾಶಯ ತಿಳಿಸಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ವಿಶ್ವನಾಥ್ ಪ್ರತಿಕ್ರಿಯಿಸಿದರು. ‘ವಿಶ್ವನಾಥ್ ಅವರು ನಮ್ಮ ಮನೆಗೆ ಬಂದು ಯೋಗಕ್ಷೇಮ ವಿಚಾರಿಸಿದರು ಅಷ್ಟೇ’ ಎಂದು ವಿಜಯ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು