ಶುಕ್ರವಾರ, ಅಕ್ಟೋಬರ್ 30, 2020
19 °C

ವ್ಯಾಸ–ವಾಲ್ಮೀಕಿ ಪೀಠ ಆರಂಭಿಸಲು ಸಿಂಡಿಕೇಟ್‌ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ವ್ಯಾಸ–ವಾಲ್ಮೀಕಿ ಅಧ್ಯಯನ ಪೀಠ ಆರಂಭಿಸಲು ಮೈಸೂರು ವಿಶ್ವವಿದ್ಯಾಲಯ ಮುಂದಾಗಿದೆ.

‘ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್‌ ಸಭೆಯು ಪೀಠ ಸ್ಥಾಪನೆಗೆ ತಾತ್ವಿಕ ಅನುಮೋದನೆ ನೀಡಿದೆ. ಪ್ರಸ್ತಾಪವನ್ನು ಸರ್ಕಾರಕ್ಕೆ ಕಳಿಸಿಕೊಡಲು ನಿರ್ಧರಿಸಲಾಗಿದ್ದು, ಒಪ್ಪಿಗೆ ಸಿಕ್ಕರೆ ಮುಂದಿನ ಹೆಜ್ಜೆ ಇಡಲಾಗುವುದು. ಈಗಾಗಲೇ ವಾಲ್ಮೀಕಿ ಅಧ್ಯಯನ ಪೀಠ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಇದೆ. ಹೀಗಾಗಿ, ವ್ಯಾಸ–ವಾಲ್ಮೀಕಿ ಪೀಠ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ’ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು