ಬುಧವಾರ, ಏಪ್ರಿಲ್ 14, 2021
23 °C

ಒಡೆಯರ್ ಜನ್ಮಶತಮಾನೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ಸಂಸ್ಥಾನದ ಕೊನೆ ಅರಸ ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಜುಲೈ 18ರಂದು (ಗುರುವಾರ) ಅರಮನೆ ಆವರಣ ಸೇರಿದಂತೆ, ನಗರ, ಜಿಲ್ಲೆಯಾದ್ಯಂತ ವಿವಿಧೆಡೆ ನಡೆಯಲಿದೆ.

ಅರಮನೆಯ ದರ್ಬಾರ್‌ ಹಾಲ್‌ನಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್‌ ವತಿಯಿಂದ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಉದ್ಘಾಟಿಸಲಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ದಿನವಿಡಿ ವಿವಿಧ ಕಾರ್ಯಕ್ರಮ ನಡೆಯಲಿವೆ. ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.

ಒಡೆಯರ್‌ ಸಂಗೀತ ಕೃತಿಗಳ ಕುರಿತು ಕಲಾವಿದೆ ಟಿ.ಎಸ್‌.ಸತ್ಯವತಿ, ಕುಶ್ರೂ ಎನ್‌.ಸಂತೂಕ್ ಮಾತನಾಡಲಿದ್ದಾರೆ. ವಿವಿಧ ಕ್ಷೇತ್ರದ ಸಾಧಕರನ್ನು ಇದೇ ಸಂದರ್ಭ ಸನ್ಮಾನಿಸಿ, ಜಯಚಾಮರಾಜ ಒಡೆಯರ್ ಜನ್ಮಶತಾಬ್ದಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ನಾಡಿನ ಖ್ಯಾತನಾಮರು ಈ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು