ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿನಕಲ್‌ನಲ್ಲಿ ನೀರಿಗಾಗಿ ಮತ್ತೆ ಪ್ರತಿಭಟನೆ

Last Updated 16 ಮೇ 2019, 4:25 IST
ಅಕ್ಷರ ಗಾತ್ರ

ಮೈಸೂರು: ಕುಡಿಯುವ ನೀರಿಗೆ ಆಗ್ರಹಿಸಿ ನಿವಾಸಿಗಳು ಹಿನಕಲ್ ಗ್ರಾಮ ಪಂಚಾಯಿತಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

ಪಂಚಾಯಿತಿಯಲ್ಲಿ ಅಧಿಕಾರಿಗಳು 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ, ವಾಸ್ತವದಲ್ಲಿ ವಾರಕ್ಕೊಮ್ಮೆಯೂ ಹಲವೆಡೆ ನೀರು ಬರುವುದಿಲ್ಲ. ಇದರಿಂದ ಗೃಹಕೃತ್ಯಗಳಿಗೆ ತೊಂದರೆಯಾಗಿದೆ ಎಂದು ಅವರು ಆರೋಪಿಸಿದರು.

ನೀರಿನ ಸಮಸ್ಯೆ ಪರಿಹಾರವಾಗುವುದಿರಲಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಇದರಿಂದ ವಾರಕ್ಕೊಮ್ಮೆ ಸ್ನಾನ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕುಡಿಯಲು ನೀರು ಕೊಡಬೇಕು ಎಂದು ಅವರು ಆಗ್ರಹಿಸಿದರು.

ಪ್ರಭಾವಿ ವ್ಯಕ್ತಿಗಳ ಮನೆಗಳಲ್ಲಿ ಎರಡಕ್ಕೂ ಹೆಚ್ಚು ಸಂಪರ್ಕಗಳಿವೆ. ಬಡವರ ಮನೆಗಳಲ್ಲಿರುವ ಒಂದೇ ಒಂದು ನಲ್ಲಿಗೂ ನೀರು ಬರುತ್ತಿಲ್ಲ. ಶ್ರೀಮಂತರು ಮೋಟಾರು ಹಾಕಿ ನೀರನ್ನು ಎಳೆದುಕೊಳ್ಳುತ್ತಿದ್ದಾರೆ. ಅಕ್ರಮ ಸಂಪರ್ಕಗಳಿಂದಾಗಿ ನೀರಿನ ಸಮಸ್ಯೆ ತಾರಕಕ್ಕೇರಿದೆ ಎಂದು ಅವರು ಅಳಲು ತೋಡಿಕೊಂಡರು.

ಈ ಹಿಂದೆಯೂ ಸಾಕಷ್ಟು ಬಾರಿ ನಿವಾಸಿಗಳು ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆದರೂ ಸಮಸ್ಯೆ ನಿವಾರಣೆ ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT