ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡೂವರೆ ವರ್ಷ ಅಧಿಕಾರಾವಧಿ ಇದ್ದು, ಅಭಿವೃದ್ಧಿ ಕೆಲಸ ಪೂರ್ಣಗೊಳಿಸುವೆ: ಯಡಿಯೂರಪ್ಪ

ಮೈಸೂರು ಜಿಲ್ಲೆ ಮುಡುಕುತೊರೆ ದೇಗುಲ ನಿರ್ಮಾಣಕ್ಕೆ ₹ 10 ಕೋಟಿ ಘೋಷಣೆ–ಯಡಿಯೂರಪ್ಪ
Last Updated 25 ನವೆಂಬರ್ 2020, 14:42 IST
ಅಕ್ಷರ ಗಾತ್ರ

ಮೈಸೂರು: ತಿ.ನರಸೀಪುರ ತಾಲ್ಲೂಕಿನ ತಲಕಾಡುಪಂಚಲಿಂಗಗಳಲ್ಲಿ ಒಂದಾಗಿರುವ ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ದೇಗುಲವನ್ನು ಪುನರ್‌ ನಿರ್ಮಾಣ ಮಾಡಲು ವಾರದಲ್ಲಿ ₹ 10 ಕೋಟಿ ಬಿಡುಗಡೆ ಮಾಡಲಾಗುವುದುಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದರು.

ಮುಡುಕುತೊರೆ ಗ್ರಾಮದಲ್ಲಿ ₹ 30 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಾರ್ಯಕ್ಕೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿಈವಿಚಾರ ಪ್ರಕಟಿಸಿದರು.

‘ಯಾವುದೇ ವ್ಯಕ್ತಿಯ ಸಾಧನೆ ಮಾತನಾಡಬೇಕೇ ಹೊರತು ಮಾತೇ ಸಾಧನೆ ಆಗಬಾರದು. ಇನ್ನೂ ಎರಡೂವರೆ ವರ್ಷ ನನ್ನ ಅಧಿಕಾರಾವಧಿ ಇದೆ. ಈ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಪೂರ್ಣಗೊಳಿಸುವ ಅಪೇಕ್ಷೆ ಹೊಂದಿದ್ದೇನೆ’ ಎಂದು ಮಾರ್ಮಿಕವಾಗಿ ನುಡಿದರು.

‘ಗುತ್ತಿಗೆದಾರರು ತಮಗೆ ಎಷ್ಟು ಬರುತ್ತೆ ಎಂದು ಯೋಚನೆ ಮಾಡದೆ ಇನ್ನು ಎರಡು ವರ್ಷಗಳಲ್ಲಿ ಈ ದೇಗುಲ ನಿರ್ಮಿಸಬೇಕು. ನನ್ನ ಅಧಿಕಾರಾವಧಿಯಲ್ಲಿ ಹಣದ ಕೊರತೆ ಉಂಟಾಗದಂತೆ ನೋಡಿಕೊಳ್ಳುತ್ತೇನೆ’ ಎಂದರು.

‘ದೇವಸ್ಥಾನಗಳ ಅಭಿವೃದ್ಧಿಗೆ ಹಣದ ಕೊರತೆಯಿಲ್ಲ. ದೇವರು ಕೊಟ್ಟಿದ್ದನ್ನು ದೇಗುಲಗಳ ಅಭಿವೃದ್ಧಿಗೇನೀಡಲಾಗುವುದು. ಕೆಲ ದಿನಗಳ ಹಿಂದೆ 136 ದೇಗುಲಗಳ ಅಭಿವೃದ್ಧಿಗೆ ತಲಾ ₹ 1 ಕೋಟಿಯಂತೆ ₹ 136 ಕೋಟಿ ಬಿಡುಗಡೆ ಮಾಡಿದ್ದೇನೆ’ ಎಂದು ತಿಳಿಸಿದರು.

ಈ ದೇಗುಲ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ₹ 16 ಕೋಟಿ ವೆಚ್ಚ ಮಾಡಲು ಅನುಮೋದನೆ ಸಿಕ್ಕಿದೆ. ಸರ್ಕಾರ ಈಗಾಗಲೇ ₹ 5 ಕೋಟಿ ಬಿಡುಗಡೆ ಮಾಡಿದೆ. ಅಲ್ಲದೇ, ಇನ್ನುಳಿದ ₹ 11 ಕೋಟಿಮೊತ್ತವನ್ನುಭಕ್ತರಿಂದ ದೇಣಿಗೆ ಸಂಗ್ರಹಿಸಲುದೇವಾಲಯ ಅಭಿವೃದ್ಧಿ ಸಮಿತಿ ರಚಿಸಲಾಗಿದೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟೊ.ಸೋಮಶೇಖರ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT