ಬುಧವಾರ, ನವೆಂಬರ್ 25, 2020
22 °C

ಪಿರಿಯಾಪಟ್ಟಣ: ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ವ್ಯಾಪಕ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ: ಇಲ್ಲಿನ ಕೆಲ್ಲೂರು– ಹೊಸಕೋಟೆ ರಸ್ತೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವತಿಯೊಬ್ಬರ ಶವ ಭಾನುವಾರ ದೊರತಿದೆ. 

ಉರಿಯುತ್ತಿದ್ದ ಸ್ಥಿತಿಯಲ್ಲಿದ್ದ ಶವವನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ದೇಹವು ಗುರುತು ಹಿಡಿಯಲಾರದಷ್ಟು ಸುಟ್ಟು ಹೋಗಿದೆ.

ಮೃತದೇಹದಲ್ಲಿ ಕೆಂಪು ಬಣ್ಣದ ಲೆಗ್ಗಿನ್ಸ್, ಕಾಲುಂಗುರ, ಕಾಲ್ಗೆಜ್ಜೆ, ಕೈಯಲ್ಲಿ ಉಂಗುರ ಪತ್ತೆಯಾಗಿದೆ. ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಸಂಘಟನೆಗಳ ಆಕ್ರೋಶ: ಘಟನೆ ಕುರಿತು ಮಹಿಳಾ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶೀಘ್ರವೇ ತನಿಖೆ ನಡೆಸಿ, ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌) ಆಗ್ರಹಿಸಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು