ಸೋಮವಾರ, ಫೆಬ್ರವರಿ 17, 2020
17 °C

ಪಿರಿಯಾಪಟ್ಟಣದಲ್ಲಿ ಹಾಡಹಗಲೆ ಮಹಿಳೆ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಸೋಮವಾರ ಹಾಡಹಗಲೆ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಇಲ್ಲಿನ ಬ್ರಾಹ್ಮಣರ ಬೀದಿಯಲ್ಲಿ ವಾಸವಿದ್ದ ಕಲಾವತಿ ಕೊಲೆಯಾದವರು. ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ದರೋಡೆ ಮಾಡಲೆಂದು ಬಂದ ದರೋಡೆಕೋರರ ಗುಂಪಿನಿಂದ ಈ ಕೃತ್ಯ ನಡೆದಿದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.‌

ಭಾನುವಾರ ನಸುಕಿನಲ್ಲಿ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಕೋರರು ಕಾರು ಮತ್ತು ಬೈಕ್‌ನ್ನು ದರೋಡೆ ಮಾಡಿದ್ದರು. ಶನಿವಾರ ರಾತ್ರಿ ಕೆ.ಆರ್.ನಗರದಲ್ಲಿ ಕಾರನ್ನು ತಡೆದ ದರೋಡೆಕೋರರು ಚಾಲಕನ ಮೇಲೆ ಹಲ್ಲೆ ನಡೆಸಿ ನಗದು ದೋಚಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು