ಮಂಗಳವಾರ, ಜನವರಿ 21, 2020
27 °C

ಮದುವೆಯಾಗುವಂತೆ ಒತ್ತಾಯಿಸಿ ಮಹಿಳೆ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದ ಠಾಣೆಯೊಂದರಲ್ಲಿ ಗೃಹರಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರನ್ನು ದಸ್ತಗೀರ್ ಎಂಬಾತ ಮದುವೆಯಾಗುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಾನೆ.

ಇವರು ವೃತ್ತವೊಂದರಲ್ಲಿ ಭಾನುವಾರ ಕರ್ತವ್ಯ ನಿರ್ವಹಿಸುತ್ತಿರುವಾಗ ಬಂದ ಆರೋಪಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ನಿರಾಕರಿಸಿದ್ದಕ್ಕೆ ಕಪಾಲಕ್ಕೆ ಹೊಡೆದು, ಕೈ ಹಾಗೂ ತಲೆಯ ಜುಟ್ಟನ್ನು ಹಿಡಿದು ಎಳೆದಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಆರೋಪಿಯ ಶೋಧಕ್ಕೆ ಬಲೆ ಬೀಸಿದ್ದಾರೆ.

ಪ್ರತಿಕ್ರಿಯಿಸಿ (+)