ಸೋಮವಾರ, ಜನವರಿ 20, 2020
18 °C

ಮೈಸೂರು: ಕಾರ್ಮಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, 15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರ್ಮಿಕರು ಇಲ್ಲಿನ ಜೆ.ಕೆ.ಮೈದಾನದಿಂದ ಪುರಭವನದವರೆಗೆ ಬುಧವಾರ ಬೃಹತ್ ಜಾಥಾ ನಡೆಸಿದರು.

ಗುಲಾಬಿ ಸೀರೆಯುಟ್ಟ ಆಶಾ ಕಾರ್ಯಕರ್ತೆಯರು, ಗಾರ್ಮೆಂಟ್ಸ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬ್ಯಾಂಕ್‌, ಅಂಚೆ ಮತ್ತು ವಿಮೆ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಬಿಟ್ಟರೆ ಉಳಿದಂತೆ ಜನಜೀವನ ಅಸ್ತವ್ಯಸ್ತಗೊಳ್ಳಲಿಲ್ಲ.

ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲು

ಮಡಿಕೇರಿ: ನಗರ ಹೊರವಲಯದ ಚೈನ್‌ಗೇಟ್‌ ಬಳಿ ಬುಧವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದು, ಬಸ್ಸಿನ ಮುಂಭಾಗದ ಗಾಜಿಗೆ ಹಾನಿಯಾಗಿದೆ.

ಬಸ್ಸು, ಮಡಿಕೇರಿಯಿಂದ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಹೊರಟಿತ್ತು. ಚೈನ್‌ಗೇಟ್‌ ಬಳಿ ಕಿಡಿಗೇಡಿಗಳು ಕಲ್ಲು ಎಸೆದು ಪರಾರಿಯಾಗಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು