ಬುಧವಾರ, ಸೆಪ್ಟೆಂಬರ್ 30, 2020
19 °C
ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ಮೈಸೂರು: ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕಟ್ಟಡ ಮತ್ತು ಇತರೆ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

ಲಾಕ್‌ಡೌನ್‌ ನಂತರ ನೋಂದಾಯಿಸಿಕೊಂಡ ಕಾರ್ಮಿಕರಿಗೂ ‘ಕೋವಿಡ್‌–19 ಸಹಾಯಧನ’ ವಿತರಿಸಬೇಕು, ಕೋವಿಡ್‌ ಕಾಯಿಲೆಯಿಂದ ಬಳಲುತ್ತಿರುವ ಕಾರ್ಮಿಕರ ಕುಟುಂಬದ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು, ರಾಜ್ಯದ ಎಲ್ಲ ಸಾರಿಗೆ ನಿಗಮಗಳಲ್ಲಿಯೂ ಉಚಿತ ಬಸ್‌ ಪಾಸ್ ನೀಡಬೇಕು ಎಂದು ಅವರು ಒತ್ತಾಯಿಸಿದರು.‌

ಕಾರ್ಮಿಕ ಚಿಕಿತ್ಸಾ ಭಾಗ್ಯ ಯೋಜನೆಯನ್ನು ಕಟ್ಟಡ ಕಾರ್ಮಿಕರ ಕುಟುಂಬದ ಸದಸ್ಯರಿಗೂ ವಿಸ್ತರಿಸಬೇಕು, ಗೃಹಭಾಗ್ಯ ಯೋಜನೆಗೆ ನೀಡುವ ಸಹಾಯಧನ, ಸಾಲಕ್ಕೆ ನಿಗದಿಪಡಿಸಿರುವ ಷರತ್ತುಗಳನ್ನು ಅರ್ಹ ಎಲ್ಲ ಕಾರ್ಮಿಕರಿಗೂ ಸಿಗುವಂತೆ ಸರಳೀಕರಣ ಮಾಡಬೇಕು ಎಂದು ಆಗ್ರಹಿಸಿದರು.

ಎಐಯುಟಿಯುಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ, ಜಂಟಿ ಜಿಲ್ಲಾ ಕಾರ್ಯದರ್ಶಿ ಮುದ್ದುಕೃಷ್ಣ, ಮುಖಂಡರಾದ ಹುಲ್ಲಹಳ್ಳಿ ಸಿದ್ಧಯ್ಯ, ಶಿರಮಳ್ಳಿ ಮಾದಪ್ಪ, ಹೆಬ್ಬಾಳು ಮಂಜುನಾಥ, ಬಾಳೆಲೆ ಸೂರಿ, ಬೋಗಾದಿ ಮಂಜು, ಅರಬ್‌ ಜಾನ್‌ ಹಾಗೂ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.