ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅತಿಯಾದ ಮೊಬೈಲ್‌ ಬಳಕೆ ಬಿಡಿ’

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ನ್ಯಾಯಾಧೀಶ ವಂಟಿಗೋಡಿ ಸಲಹೆ
Last Updated 10 ಅಕ್ಟೋಬರ್ 2019, 13:15 IST
ಅಕ್ಷರ ಗಾತ್ರ

ಮೈಸೂರು: ‘ಮೊಬೈಲ್‌ನ ಅತಿಯಾದ ಬಳಕೆಯಿಂದ ಸಮಾಜದೊಟ್ಟಿಗೆ ಹೇಗೆ ಬೆರೆಯಬೇಕೆಂಬುದನ್ನೇ ಮರೆತಿದ್ದೇವೆ. ಇದು ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರಲಾರಂಭಿಸಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಮೆಡಿಕಲ್ ಕಾಲೇಜು ವತಿಯಿಂದ ನಗರದ ಕೆ.ಆರ್.ಆಸ್ಪತ್ರೆಯ ಎಂ.ಎಂ.ಸಿ ಮತ್ತು ಆರ್.ಐ.ಪೆಥಾಲಜಿ ಆಡಿಟೋರಿಯಂನಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2019'ನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಅವರು ಮಾತನಾಡಿದರು.

‘ಈಚೆಗೆ 2 ತಾಸು ಕೈಯಲ್ಲಿ ಸ್ಮಾರ್ಟ್‍ಫೋನ್ ಇಲ್ಲದಿದ್ದರೆ, ಏನೋ ಕಳೆದುಕೊಂಡ ರೀತಿಯಲ್ಲಿ ಆಗಲಿದೆ. ಯುವ ಸಮೂಹದಲ್ಲಿ ಮೊಬೈಲ್ ಕೆಟ್ಟ ಪರಿಣಾಮ ಬೀರುತ್ತಿದೆ. ಮುಂದಾದರೂ ಎಚ್ಚೆತ್ತುಕೊಂಡು ಮೊಬೈಲ್‍ಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು. ಆದಷ್ಟು ಒಳ್ಳೆಯ ಕಾರ್ಯಗಳಿಗೆ ಬಳಸುವಂತಾಗಬೇಕು’ ಎಂಬ ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ ಮಾತನಾಡಿ ‘ದೇಶದಲ್ಲಿ ರಸ್ತೆ ಅಪಘಾತ ಮತ್ತು ಆತ್ಮಹತ್ಯೆಯಿದಲೇ ಹೆಚ್ಚು ಸಾವು ಸಂಭವಿಸುತ್ತಿದೆ. ಆತ್ಮಹತ್ಯೆಗೆ ಪ್ರಮುಖ ಕಾರಣ ಮಾನಸಿಕ ರೋಗ. ವೈಜ್ಞಾನಿಕವಾಗಿ ವಿಚಾರ ಮಾಡದೆ ಟಿವಿಯಲ್ಲಿ ಬರುವ ಜ್ಯೋತಿಷ್ಯಗಳ ಮಾತು ಕೇಳುವುರಿಂದಲೇ ಮಾನಸಿಕ ರೋಗ ಹೆಚ್ಚಾಗುತ್ತಿದೆ’ ಎಂದರು.

ಮನೋರೋಗ ವಿಭಾಗದ ಮುಖ್ಯಸ್ಥ ಡಾ.ಬಿ.ಎನ್.ರವೀಶ್, ವಕೀಲ ಎನ್.ಸುಂದರರಾಜ್ ಉಪನ್ಯಾಸ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ, ಡಿಸಿಪಿ ಬಿ.ಟಿ.ಕವಿತಾ, ಡಿಎಚ್‌ಒ ಡಾ.ವೆಂಕಟೇಶ್, ಮೈಸೂರು ಮೆಡಿಕಲ್ ಡೀನ್ ಮತ್ತು ನಿರ್ದೇಶಕ ಡಾ.ನಂಜರಾಜು, ಕೆ.ಆರ್.ಆಸ್ಪತ್ರೆ ಅಧೀಕ್ಷಕ ಡಾ.ನಂಜುಂಡಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜು, ತಾಲ್ಲೂಕು ವೈದ್ಯಾಧಿಕಾರಿ ಡಾ.ಮಹದೇವಪ್ರಸಾದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT