ಶುಕ್ರವಾರ, ನವೆಂಬರ್ 22, 2019
20 °C
ವಿದ್ಯಾವರ್ಧಕ ಕಾಲೇಜಿನಲ್ಲಿ ‘ವಿಶ್ವ ಓಜೋನ್ ದಿನ'

ಪ್ಲಾಸ್ಟಿಕ್‌ ಮುಕ್ತ ಮೈಸೂರು: ಯದುವೀರ್

Published:
Updated:
Prajavani

ಮೈಸೂರು: ‘ಪ್ಲಾಸ್ಟಿಕ್‌ ಮುಕ್ತ ಮೈಸೂರು ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.

ನಗರದ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಬಿ.ಸಿ.ಲಿಂಗಯ್ಯ ಸಭಾಂಗಣದಲ್ಲಿ ‘ವಿಶ್ವ ಓಜೋನ್ ದಿನ'ದ ಅಂಗವಾಗಿ ಸೋಮವಾರ ಆಯೋಜಿಸಿದ್ದ ‘ಅರಿವಿನ ಅಂಗಣ' ಕಾರ್ಯಕ್ರಮ ಉದ್ಘಾಟಿಸಿದ ಅವರು, ‘ಮೊದಲು ಮನೆಗಳಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಬೇಕಿದೆ’ ಎಂದು ಹೇಳಿದರು.

‘ಮೈಸೂರಿನ ದೇವರಾಜ ಮಾರುಕಟ್ಟೆಗೆ ಬರುವ ಗ್ರಾಹಕರು ತಾವೇ ತಂದ ಬ್ಯಾಗ್‍ಗಳಲ್ಲಿ ವಸ್ತುಗಳನ್ನು ಕೊಂಡೊಯ್ಯುತ್ತಾರೆ. ಇದರಿಂದ ಮಾರುಕಟ್ಟೆ ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರಸ್ನೇಹಿ ವಾತಾವರಣ ಹೊಂದಿದೆ. ಕಟ್ಟಡವನ್ನು ನೆಲಸಮಗೊಳಿಸಿ, ಪುನರ್ ನಿರ್ಮಾಣ ಮಾಡಿದರೆ, ಕಟ್ಟಡಕ್ಕೂ ಪ್ಲಾಸ್ಟಿಕ್ ಕಂಟಕ ಆವರಿಸುತ್ತದೆ’ ಎಂದು ಯದುವೀರ್‌ ಕಳವಳ ವ್ಯಕ್ತಪಡಿಸಿದರು.

ಪ್ರಾಂಶುಪಾಲ ಬಿ.ಸದಾಶಿವೇಗೌಡ, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ವಿ.ಗುಂಡಪ್ಪಗೌಡ, ಪ್ರಧಾನ ಕಾರ್ಯದರ್ಶಿ ಪಿ.ವಿಶ್ವನಾಥ್, ಶ್ರೀಶೈಲ ರಾಮಣ್ಣನವರ, ಡಾ.ಜೆ.ರವಿಕುಮಾರ್ ಉಪಸ್ಥಿತರಿದರು.

ಪ್ರತಿಕ್ರಿಯಿಸಿ (+)