ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ ದಿನಾಚರಣೆ: ಅರಮನೆ ಆವರಣದಲ್ಲಿ ಪೂರ್ವಭ್ಯಾಸ,12 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Last Updated 12 ಜೂನ್ 2022, 3:10 IST
ಅಕ್ಷರ ಗಾತ್ರ

ಮೈಸೂರು: ಅರಮನೆ ಆವರಣದಲ್ಲಿ ಜೂನ್ 21ರಂದು ನಡೆಯುವ ಅಂತರರಾಷ್ಟ್ರೀಯ ಯೋಗದಿನಾಚರಣೆ ಪ್ರಯುಕ್ತ ಭಾನುವಾರ 12 ಸಾವಿರಕ್ಕೂ ಹೆಚ್ಚು ಮಂದಿ ಯೋಗಾಭ್ಯಾಸ ಮಾಡಿದರು.

ಯೋಗ ಫೆಡರೇಷನ್ ಆಫ್ ಮೈಸೂರು ಪದಾಧಿಕಾರಿಗಳಾದ ಶ್ರೀಹರಿ, ಡಾ.ಪಿ.ಎನ್.ಗಣೇಶ್ ಕುಮಾರ್, ಸತ್ಯನಾರಾಯಣ, ಬಿ.ಪಿ.ಮೂರ್ತಿ, ಶಶಿಕುಮಾರ್ ಅವರು ಯೋಗಭ್ಯಾಸಿಗಳಿಗೆ ಮಾರ್ಗದರ್ಶನ ನೀಡಿದರು.

ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ಮಂಡೂಕಾಸನ, ಮಕರಾಸನ, ಭುಂಜಂಗಾಸನ, ಶಲಭಾಸನ, ಸೇತುಬಂಧಾಸನ, ಪಾದಾಸನ, ಹಲಾಸನ, ಪವನ ಮುಕ್ತಾಸನ, ಶವಾಸನಗಳನ್ನು ವಿದ್ಯಾರ್ಥಿಗಳು, ನಾಗರಿಕರು ಅಭ್ಯಾಸಿಸಿದರು‌. ಪ್ರಾಣಾಯಾಮ, ಧ್ಯಾನ, ಸಂಕಲ್ಪವನ್ನು ತರಬೇತುದಾರ ಗಣೇಶ್ ಹೇಳಿಕೊಟ್ಟರು.

ಇದಕ್ಕೂ ಮುನ್ನ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪೂರ್ವಭ್ಯಾಸಕ್ಕೆ ಚಾಲನೆ ನೀಡಿದರು.

ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಪ್ರತಾಪಸಿಂಹ, ಕೇಂದ್ರ ಮುರಾರ್ಜಿ ದೇಸಾಯಿ ಯೋಗ ಮತ್ತು ನ್ಯಾಚುರೋಪತಿ ಸಂಸ್ಥೆಯ ನಿರ್ದೇಶಕ ಡಾ.ಈಶ್ವರ್ ಬಸವಾರೆಡ್ಡಿ, ಶಾಸಕ ಎಸ್.ಎ.ರಾಮದಾಸ್, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಯ ಅಧ್ಯಕ್ಷ ಎನ್.ವಿ.ಫಣೀಶ್, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎನ್.ಸುಬ್ರಹ್ಮಣ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT