ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಯೋಗಥಾನ್: ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬೇಡಿ’

Last Updated 9 ಸೆಪ್ಟೆಂಬರ್ 2022, 15:56 IST
ಅಕ್ಷರ ಗಾತ್ರ

ಮೈಸೂರು: ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸೆ.17ರಂದು ಯೋಗಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನಗರದಲ್ಲಿ 50ಸಾವಿರ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಯೋಗಾಸನಗಳನ್ನು ಪ್ರದರ್ಶಿಸಲು ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈಗಾಗಲೇ 24ಸಾವಿರ ನೋಂದಣಿ ಆಗಿದೆ. ಉಳಿದ 26 ಸಾವಿರ ವಿದ್ಯಾರ್ಥಿಗಳ ನೋಂದಣಿಗೆ ಗಮನಹರಿಸಬೇಕು. ಪರೀಕ್ಷೆಗಳೂ ಹತ್ತಿರ ಬರುತ್ತಿರುವುದರಿಂದ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ನೆಹರೂ ಯುವ ಕೇಂದ್ರದ ರಾಜ್ಯ ನಿರ್ದೇಶಕ ನಟರಾಜ್ ಮಾತನಾಡಿ, ‘ಮೈಸೂರಿಗೂ ಹಾಗೂ ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ವಿಶ್ವ ಯೋಗ ದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಿ ಯೋಗ ಮಾಡಿದ್ದಾರೆ ಹಾಗೂ ಅದರ ಮಹತ್ವವನ್ನು ತಿಳಿಸಿದ್ದಾರೆ. ಹೀಗಾಗಿ ಯೋಗ ಒಂದು ವರ್ಗಕ್ಕೆ ಸೀಮಿತವಾಗಬಾರದು’ ಎಂದರು.

‘ಯೋಗಥಾನ್ ಕಾರ್ಯಕ್ರಮವನ್ನು ರೇಸ್‌ ಕೋರ್ಸ್ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. ನಗರದ ಕೇಂದ್ರ ಭಾಗದಲ್ಲಿರುವ ಶಾಲಾ-ಕಾಲೇಜುಗಳಿಗೆ ತೆರಳಿ ಪ್ರಾಂಶುಪಾಲರಿಗೆ ವಿಷಯದ ಬಗ್ಗೆ ಅರಿವು ಮೂಡಿಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಆಗುವಂತೆ ಗಮನಹರಿಸಬೇಕು’ ಎಂದು ಹೇಳಿದರು.

ಯೋಗ ಒಕ್ಕೂಟದ ಅಧ್ಯಕ್ಷ ಶ್ರೀಹರಿ, ಉಪಾಧ್ಯಕ್ಷ ಶಶಿಕುಮಾರ್, ಆಯುಷ್ ಕಾರ್ಯಕ್ರಮದ ರಾಜ್ಯ ಸಂಯೋಜನಾಧಿಕಾರಿ ವಿವೇಕ್, ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜನಾಧಿಕಾರಿ ಸುರೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT