ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರಿನಲ್ಲಿ 19ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನ: ವೈ.ಕೆ.ಮುದ್ದುಕೃಷ್ಣ

Published : 23 ಸೆಪ್ಟೆಂಬರ್ 2024, 15:23 IST
Last Updated : 23 ಸೆಪ್ಟೆಂಬರ್ 2024, 15:23 IST
ಫಾಲೋ ಮಾಡಿ
Comments

ಚಾಮರಾನಗರ: ಜನವರಿ ಅಂತ್ಯ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಮೈಸೂರಿನಲ್ಲಿ 19ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ರಾಜ್ಯಾದ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಜೆ.ಎಚ್‌.ಪಟೇಲ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸುಗಮ ಸಂಗೀತ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ’ಮೈಸೂರಿನ ಕಲಾಮಂದಿರದಲ್ಲಿ ಸಮ್ಮೇಳನ ನಡೆಸಿ, ಮಹಾರಾಜ ಕಾಲೇಜು ಮೈದಾನದಲ್ಲಿ ಸುಗಮ ಸಂಗೀತ ಗಾಯನ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

ಅಸಮಾಧಾನ:

ನಾಟಕ, ಸಂಗೀತ ಸೇರಿದಂತೆ ಕಲೆಗಳ ಪೋಷಣೆಯ ಜವಾಬ್ದಾರಿ ಹೊತ್ತಿರುವ ಸರ್ಕಾರ ಸಮ್ಮೇಳನಗಳ ಆಯೋಜನೆಗೆ ಸಮರ್ಪಕ ಅನುದಾನ ಬಿಡುಗಡೆ ಮಾಡದಿರುವುದು ಬೇಸರದ ಸಂಗತಿ. ಕಂತುಗಳಲ್ಲಿ ಹಣ ಬಿಡುಗಡೆ ಮಾಡುವ ಪ್ರವೃತ್ತಿ ಮೊದಲು ನಿಲ್ಲಬೇಕು. ಸಂಘ ಸಂಸ್ಥೆಗಳ ಹಾಗೂ ಸಾಂಸ್ಕೃತಿಕ ಲೋಕದ ಕಡೆಗಣನೆ ಸಲ್ಲದು ಎಂದು ವೈ.ಕೆ.ಮುದ್ದುಕೃಷ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT