ಬುಧವಾರ, ನವೆಂಬರ್ 30, 2022
16 °C

ಹಾಸನದಲ್ಲಿ ಎಸ್ ಡಿ ಪಿ ಐ ನ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ದೇಶದಾದ್ಯಂತ ಎಸ್.ಡಿಪಿಐ ಹಾಗೂ ಪಿಎಫ್ ಐ ಮುಖಂಡರ ಮೇಲೆ ಎನ್.ಐ.ಎ ದಾಳಿ ನಡೆದ ನಂತರ ಪ್ರತಿಭಟನೆ, ಶಾಂತಿ ಕದಡುವ ಸಾಧ್ಯತೆ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಿಕ್ ಆನೆಮಹಲ್, ಪ್ರಧಾನ ಕಾರ್ಯದರ್ಶಿ ಸೈಯದ್ ಫರೀದ್ ಅವರನ್ನು  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎನ್ ಐ ಎ ದಾಳಿ ಬಳಿಕ ಪ್ರತಿಭಟನೆ, ಶಾಂತಿಕದಡುವ ಸಾಧ್ಯತೆ ಹಿನ್ನೆಲೆಯಲ್ಲಿ  ಹಲವರು ವಶಕ್ಕೆ ಪಡೆಯಲಾಗಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ನಾನಾ ಜಿಲ್ಲೆಯಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು, ಹಾಸನದಲ್ಲಿ ಸಿದ್ದಿಕ್ ಅವರನ್ನು ಸೋಮವಾರ ವಶಕ್ಕೆ ಪಡೆದ ಸಕಲೇಶಪುರ ಪೊಲೀಸರು, ಸಕಲೇಶಪುರ ಉಪ ವಿಭಾಗಾಧಿಕಾರಿ ಎದುರು ಹಾಜರುಪಡಿಸಿದ್ದಾರೆ.

ಸಿದ್ದಿಕ್  ಹಾಗೂ ಸೈಯದ್ ಫರೀದ್ ಎಂಬುವವರ ಬಂಧನದ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಹರಿರಾಮ್ ಶಂಕರ್, ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿರುವುದಾಗಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು