ಮೈಸೂರು: 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 28 ವರ್ಷದ ಆರೋಪಿಯೊಬ್ಬನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ ₹50 ಸಾವಿರ ದಂಡ ವಿಧಿಸಿದೆ.

ಸಂಬಂಧದಲ್ಲಿ ಮಾವ ಆಗಬೇಕಿದ್ದ ಆರೋಪಿಯು ಆಟವಾಡುತ್ತಿದ್ದ ಬಾಲಕಿಯನ್ನು ಕಳೆದ ವರ್ಷ ಡಿಸೆಂಬರ್ 19ರಂದು ಚಾಕೋಲೆಟ್ ಕೊಡುವ ಆಮಿಷ ಒಡ್ಡಿ ಸ್ನಾನದ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ, ರಕ್ತದ ಕಲೆಯಾಗಿದ್ದ ಬಾಲಕಿಯ ಒಳ ಉಡುಪನ್ನು ಸ್ನಾನದ ಮನೆಯ ಒಲೆಗೆ ಹಾಕಿ ಸುಟ್ಟು ಹಾಕಿದ್ದಲ್ಲದೇ ತನ್ನ ಬಟ್ಟೆಯನ್ನು ಒಗೆಯುವ ಮೂಲಕ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ.

ಬಾಲಕಿಯಿಂದ ವಿಚಾರ ತಿಳಿದ ಪೋಷಕರು ನೀಡಿದ ದೂರನ್ನು ದಾಖಲಿಸಿಕೊಂಡ ಪೊಲೀಸರು, ತ್ವರಿತವಾಗಿ ವಿಚಾರಣೆ ನಡೆಸಿ ಮಾರ್ಚ್ 6ರಂದು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಕೈಗೆತ್ತಿಗೊಂಡ ಪೋಕ್ಸೊ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ, ನಿರಂತರವಾಗಿ ವಿಚಾರಣೆ ನಡೆಸಿ 42 ದಿನಗಳಲ್ಲೇ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಎಸ್.ಮಂಜುಳಾ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.