ಸುತ್ತೂರು ಮಠದ ಆಶ್ರಯದಲ್ಲಿರುವ ಜೆಎಸ್‍ಎಸ್ ವಸತಿ ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ರಾಜ್ಯ ಮಾತ್ರವಲ್ಲದೇ ಮೇಘಾಲಯ, ಮಣಿಪುರ, ಅರುಣಾಚಲಪ್ರದೇಶ, ಮಿಜೋರಾಂ, ಒರಿಸ್ಸಾ, ಜಾರ್ಖಂಡ್, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರ ಮೊದಲಾದ ರಾಜ್ಯಗಳ ಮುನ್ನೂರಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.