ಮೈಸೂರು: ಕಾಮಗಾರಿ ಹಣ ಬಾಕಿ ಪಾವತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಿರಿಯ ಎಂಜಿನಿಯರ್ ಆಗಿದ್ದ ಮನೋಹರ್ ಎಂಬಾತನಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು 6 ವರ್ಷ ಜೈಲು ಹಾಗೂ ₹ 1.35 ಲಕ್ಷ ದಂಡ ವಿಧಿಸಿದೆ.

ಕೆ.ಆರ್.ನಗರದ ಪ್ರಥಮದರ್ಜೆ ಗುತ್ತಿಗೆದಾರ ಎಚ್.ಎಸ್.ಜಗದೀಶ್ ಅವರು ₹ 8 ಲಕ್ಷ ವೆಚ್ಚದ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದರು. ಅರ್ಧ ಕಾಮಗಾರಿ ಮುಗಿದ ಬಳಿಕ ₹ 4.28 ಲಕ್ಷ ಪಡೆದಿದ್ದರು. ಕಾಮಗಾರಿ ಪೂರ್ಣಗೊಂಡ ಬಳಿಕ ₹ 3.99 ಲಕ್ಷ ಬಿಡುಗಡೆ ಮಾಡಲು 2015ರ ಮಾರ್ಚ್ ತಿಂಗಳಿನಲ್ಲಿಮನೋಹರ್ ₹ 1.5 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ. ಈ ಸಂಭಾಷಣೆಯನ್ನು ಧ್ವನಿ ಮುದ್ರಿಸಿಕೊಂಡ ಜಗದೀಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ₹ 1 ಲಕ್ಷ ಲಂಚ ನೀಡುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಮನೋಹರ್‌ನನ್ನು ಬಂಧಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಭರತ್‌ಕುಮಾರ್ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಕಲಿಯಂಡ ಮುತ್ತಮ್ಮ ಪೂಣಚ್ಚ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.