ಮೈಸೂರು: ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಮಂಗಳವಾರ ಹೊಸದಾಗಿ 737 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 12 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 18 ಸಾವಿರ ದಾಟಿದೆ. ಸದ್ಯ 5,299 ಸಕ್ರಿಯ ಪ್ರಕರಣಗಳು ಇವೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ಮೃತರ ಒಟ್ಟು ಸಂಖ್ಯೆ 456ಕ್ಕೇರಿದೆ. 30, 48, 55 ವರ್ಷದ ಮಹಿಳೆಯರು, 62, 65, 79 ವರ್ಷದ ವೃದ್ಧೆಯರು, 45 ವರ್ಷದ ಇಬ್ಬರು ಪುರುಷರು, 60 ವರ್ಷದ ಇಬ್ಬರು ವೃದ್ಧರು, 73, 83 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಇದುವರೆಗೆ ಲಕ್ಷಕ್ಕೂ ಅಧಿಕ ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಬುಧವಾರವೂ 12 ಕೇಂದ್ರಗಳಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಪರೀಕ್ಷೆ ನಡೆಸಲಾಗುತ್ತಿದೆ.

ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸುವ ಸಂಬಂಧ ಮುಖ್ಯಮಂತ್ರಿ ಜೊತೆ ಮಾತನಾಡಿದ್ದು, ಕೆಲವೇ ದಿನಗಳಲ್ಲಿ ಅದು ಸಾಕಾರಗೊಳ್ಳಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.