ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹80 ಸಾವಿರ ವಂಚನೆ: ಪ್ರಕರಣ ದಾಖಲು

Published 17 ಮೇ 2024, 9:01 IST
Last Updated 17 ಮೇ 2024, 9:01 IST
ಅಕ್ಷರ ಗಾತ್ರ

ಮೈಸೂರು: ಸಹಾಯಕ ಪ್ರಾಧ್ಯಾಪಕ ಕೆ.ಸಿ.ನಂದೀಶ್‌ ಅವರಿಗೆ ಕಡಿಮೆ ಬೆಲೆಗೆ ಕಬ್ಬಿಣ ಹಾಗೂ ಸಿಮೆಂಟ್‌ ಕೊಡಿಸುತ್ತೇನೆಂದು ನಂಬಿಸಿ ಅವರಿಂದ ₹80 ಸಾವಿರ ಹಣ ಪಡೆದು ವಂಚಿಸಿದ ಆರೋಪದಲ್ಲಿ ಚನ್ನರಾಯಪಟ್ಟಣ ನಿವಾಸಿ ನಂದ ವಿರುದ್ಧ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂದ ಮೇ 13ರಂದು ನಂದಿಶ್‌ ಅವರಿಗೆ ಕರೆ ಮಾಡಿ, ‘ನಾನು ಲ್ಯಾಂಡ್‌ ಆರ್ಮಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕಾಮಗಾರಿಗೆ ತಂದಿರುವ ಕಬ್ಬಿಣ ಹಾಗೂ ಸಿಮೆಂಟ್‌ ಅನ್ನು ಕಡಿಮೆ ಬೆಲೆಗೆ ಕೊಡುತ್ತೇನೆ’ ಎಂದು ನಂಬಿಸಿ, ಫೋನ್‌ ಪೇ ಮೂಲಕ ₹80 ಸಾವಿರವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ನಂತರ ಆರೋಪಿ ಸಂಪರ್ಕಕ್ಕೆ ಸಿಗದಿದ್ದಾಗ ನಂದೀಶ್‌ ಅವರ ಸಂಸ್ಥೆಗೆ ತೆರಳಿ ವಿಚಾರಿಸಿದ್ದು, ಆತ ಅಲ್ಲಿ ಇದೇ ಮಾದರಿಯ ಪ್ರಕರಣದಲ್ಲಿ ಸಿಕ್ಕಿಬಿದ್ದು ಅಮಾನತ್ತಾಗಿರುವುದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT