ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದಾಪುರ: ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

Published 14 ಜೂನ್ 2024, 13:44 IST
Last Updated 14 ಜೂನ್ 2024, 13:44 IST
ಅಕ್ಷರ ಗಾತ್ರ

ಸಿದ್ದಾಪುರ: ನೆಲ್ಯಹುದಿಕೇರಿ ಗ್ರಾಮದಲ್ಲಿ ಗುರುವಾರ ಯುವಕ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಗ್ರಾಮದ ಶಾಲೆ ರಸ್ತೆ ನಿವಾಸಿ ಜೇಮ್ಸ್ ಎಂಬುವರ ಪುತ್ರ ಜಾನ್ಸನ್ ಎ.ಜೆ (23) ಆತ್ಮಹತ್ಯೆ ಮಾಡಿಕೊಂಡ ಯುವಕ.

ಜಾನ್ಸನ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು,‌ ಕೆಲವು ದಿನಗಳಿಂದ ಆಕೆ ಮಾತನಾಡುತ್ತಿರಲಿಲ್ಲ ಎಂದು ಕೆಲವರಲ್ಲಿ ಜಾನ್ಸನ್‌ ಹೇಳಿಕೊಂಡಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ಊಟ ಮುಗಿಸಿ ಮಲಗಲು ಕೋಣೆಗೆ ಹೋದವರು ಬೆಳಿಗ್ಗೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮನೆಯವರು ಬಾಗಿಲು ತೆಗೆದು ನೋಡಿದಾಗ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಯುವಕನ ಅಣ್ಣ ಅಗಸ್ಟಿನ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT