ಮೈಸೂರು: ನಗರದ ಮೇಟಗಳ್ಳಿಯ ರಿಂಗ್ ರಸ್ತೆಯಲ್ಲಿ ಮಂಗಳವಾರ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಒಬ್ಬರು ತೀವ್ರ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣ ಗಾಯಗಳಾಗಿವೆ. ಮೂವರು ಗಾಯಾಳುಗಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಬಿ.ಎಂ.ಶ್ರೀ. ನಗರದ ಮೋಹನ್ (28) ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಲವತ್ತ ಗ್ರಾಮದ ಸುರೇಶ್ (23), ಕ್ಯಾತಮಾರಹಳ್ಳಿಯ ಸತೀಶ್ ಸಹ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಕ್‌ನಲ್ಲಿ ಬೆಲವತ್ತ ಗ್ರಾಮದತ್ತ ಹೋಗುತ್ತಿದ್ದ ಸತೀಶ್ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬಂದ ಕಾರು ಗುದ್ದಿದೆ. ನಂತರ ಮೋಹನ್ ಮತ್ತು ಸುರೇಶ್ ಚಲಿಸುತ್ತಿದ್ದ ಸ್ಕೂಟರ್‌ಗೂ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೋಹನ್ ತೀವ್ರವಾಗಿ ಗಾಯಗೊಂಡಿದ್ದಾರೆ. ಹಿಂಬದಿ ಸವಾರ ಸುರೇಶ್ ಮತ್ತು ಮತ್ತೊಂದು ಬೈಕ್ ಸವಾರ ಸತೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವಿ.ವಿ.ಪುರಂ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.