ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಮೈಸೂರಿನ ಮೂವರು ಸಾವು, ಆರು ಮಂದಿಗೆ ಗಾಯ

Published 17 ಫೆಬ್ರುವರಿ 2024, 4:36 IST
Last Updated 17 ಫೆಬ್ರುವರಿ 2024, 4:36 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜಿನ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಲಾರಿ ಮತ್ತು ಟಿ.ಟಿ (ಟೆಂಪೊ ಟ್ರಾವೆಲರ್) ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಮೈಸೂರಿನ ಸೋಮಲಿಂಗಪ್ಪ(70), ಸೋಮಣ್ಣ(68) ಹಾಗೂ ರಾಜೇಶ್ವರಿ(52) ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರೊಬ್ಬರ ಮದುವೆಗಾಗಿ ಹಾವೇರಿಗೆ ಹೋಗಿದ್ದ ಕುಟುಂಬದವರು ಬೆಂಗಳೂರಿಗೆ ಬಂದು, ಅಲ್ಲಿಂದ ಮೈಸೂರಿಗೆ ವಾಪಸ್ಸಾಗುತ್ತಿದ್ದಾಗ ವೇಳೆ ಘಟನೆ ನಡೆದಿದೆ.

ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದರು. ಅಪಘಾತದಿಂದ ನಜ್ಜುಗುಜ್ಜಾಗಿದ್ದ ವಾಹನಗಳನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT